ಅನಾರೋಗ್ಯದಿಂದ ಬೇಸತ್ತು ಮಾತ್ರೆ ನುಂಗಿ ಸಾವಿಗೆ ಶರಣಾದ ಯುವಕ
ಆರೋಗ್ಯ ಸುಧಾರಿಸುವ ಲಕ್ಷಣಗಳಿಲ್ಲದಿದ್ದರಿಂದ ನೊಂದ ಯುವಕ ಕೊನೆಗೂ ತಾನೇ ಸಾವನ್ನು ತಂದುಕೊಂಡಿದ್ದಾನೆ.
Vijaya Karnataka Web 17 Sep 2019, 11:34 am
ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟೇಗೌಡ ಎಂಬುವರ ಮಗ ವಿಜಯ್(23) ಆತ್ಮಹತ್ಯೆಗೆ ಶರಣಾದ ಯುವಕ.
ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್, ಆರೋಗ್ಯ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು. ಮತ್ತಿದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆಯಲ್ಲಿದ್ದ ಯಾವ್ಯಾವುದೋ ಮಾತ್ರೆಗಳನ್ನು ಒಟ್ಟಿಗೆ ಸೇವಿಸಿದ್ದ ಯುವಕ ವಿಜಯ್ನನ್ನು ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.