ಆ್ಯಪ್ನಗರ

ನಾಲೆಗೆ ನೀರು ಹರಿಸಲು ಒತ್ತಾಯ

ಕೆಆರ್‌ಎಸ್ ಜಲಾಶಯ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಶೀಘ್ರ ನೀರು ಹರಿಸುವಂತೆ ಒತ್ತಾಯಿಸಿ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ರೈತ ಸಂಘದ ಕಾರ‌್ಯಕರ್ತರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನವೂ ಮುಂದುವರೆದಿದೆ.

ವಿಕಸುದ್ದಿಲೋಕ 8 Aug 2017, 5:15 am
ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಶೀಘ್ರ ನೀರು ಹರಿಸುವಂತೆ ಒತ್ತಾಯಿಸಿ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ರೈತ ಸಂಘದ ಕಾರ‌್ಯಕರ್ತರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನವೂ ಮುಂದುವರೆದಿದೆ.
Vijaya Karnataka Web insist on watering the water
ನಾಲೆಗೆ ನೀರು ಹರಿಸಲು ಒತ್ತಾಯ


ಬೆಂಗಳೂರು,ಮೈಸೂರು ಹೆದ್ದಾರಿಯ ಕುವೆಂಪು ಪ್ರತಿಮೆ ಎದುರು ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ ಪಾಟೀಲ್ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಸತತ 3 ವರ್ಷಗಳಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಜನ, ಜಾನುವಾರುಗಳಿಗೆ ಕುಡಿಯಲು ಸಹ ನೀರಿಲ್ಲದ ಪರಿಸ್ಥಿತಿ ಇದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿದೆ. ಜನ, ಜಾನುವಾರುಗಳಿಗೆ ನೀರು ಕೊಡಿ ಎಂದು ಚಳುವಳಿ ಮಾಡುತ್ತಿದ್ದರೂ ಸರಕಾರ ಅದನ್ನು ಲೆಕ್ಕಿಸದೆ ಅಧಿಕಾರ ಉಳಿಸಿಕೊಳ್ಳಲು ತಮಿಳುನಾಡಿಗೆ ನೀರು ಹರಿಸಿ ರೈತರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಇದೇ ಧೋರಣೆ ಮುಂದುವರೆಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಿಎಸ್‌ಎಸ್‌ಕೆ ನಿರ್ದೇಶಕರಾದ ಪಾಂಡು, ಕಷ್ಣೇಗೌಡ, ಎಂ.ವಿ.ಕಷ್ಣ, ಮೇಳಾಪುರ ಜಯರಾಂ, ವಕೀಲ ಪುಟ್ಟಸ್ವಾಮಿ ಸೇರಿದಂತೆ ನೂರಾರು ರೈತರು ಪ್ರತಿಭಟನಾ ಧರಣಿಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ