ಆ್ಯಪ್ನಗರ

ಮಂಡ್ಯ ಅರ್ಚಕರ ಕೊಲೆ ಪ್ರಕರಣ: ಆರೋಪಿಗಳ ಬಂಧನ

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ ಕಾರ್ಯಾಚರಣೆ ಕೈಗೊಂಡ ಪೊಲೀಸ್‌ ತಂಡವನ್ನು ಪ್ರಶಂಶಿಸಿದರು.

Vijaya Karnataka Web 14 Sep 2020, 9:00 am
ಮದ್ದೂರು: ಮಂಡ್ಯದ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯದಲ್ಲಿನ ಅರ್ಚಕ ಹಾಗೂ ಕಾವಲುಗಾರರ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Vijaya Karnataka Web ಆರೋಪಿಗಳು
ಆರೋಪಿಗಳು


ಆರೋಪಿಗಳ ಪತ್ತೆಗೆ ರಚನೆ ಮಾಡಿದ್ದ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ. ಮಹೇಶ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು.

ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು.

ಆರೋಪಿಗಳನ್ನು ಬಂಧಿಸುವಲ್ಲಿ ಮುಂದಾದ ವೇಳೆ ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂಬುವವರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾದರು.

ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಆರೋಪಿಗಳು ಹಲ್ಲೆಗೆ ಮುಂದಾದರು. ಈ ವೇಳೆ ಕಾರ್ಯಾಚರಣೆ ಕೈಗೊಂಡ ಪೊಲೀಸರು 3 ಆರೋಪಿಗಳ ಮೇಲೆ ಕಾಲಿಗೆ ಗುಂಡು ಹಾರಿಸಿದರು.

ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಚರಣೆ ವೇಳೆ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ 3 ಆರೋಪಿಗಳನ್ನು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮದ್ದೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ ಕಾರ್ಯಾಚರಣೆ ಕೈಗೊಂಡ ಪೊಲೀಸ್‌ ತಂಡವನ್ನು ಪ್ರಶಂಶಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ