ಆ್ಯಪ್ನಗರ

ರಾಹುಲ್‌ ಸಮಾವೇಶಕ್ಕೂ ಬಾರದ ‘ಮಂಡ್ಯದ ರೆಬೆಲ್ಸ್‌’

ಮಂಡ್ಯದಲ್ಲಿ ದೋಸ್ತಿಗಳಿಗೆ ತಲೆನೋವಾಗಿರುವ ಕಾಂಗ್ರೆಸ್‌ನ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ತಮ್ಮದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಆಗಮಿಸಿದರೂ ಗೈರು ಹಾಜರಾಗಿ ಜೆಡಿಎಸ್‌ ಅಭ್ಯರ್ಥಿಗೆ ತಮ್ಮ ಬೆಂಬಲವಿಲ್ಲ ಎಂದು ಪುನರುಚ್ಛರಿಸಿದ್ದಾರೆ.

Vijaya Karnataka 14 Apr 2019, 8:20 pm
ಮೈಸೂರು: ಮಂಡ್ಯದಲ್ಲಿ ದೋಸ್ತಿಗಳಿಗೆ ತಲೆನೋವಾಗಿರುವ ಕಾಂಗ್ರೆಸ್‌ನ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ತಮ್ಮದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಆಗಮಿಸಿದರೂ ಗೈರು ಹಾಜರಾಗಿ ಜೆಡಿಎಸ್‌ ಅಭ್ಯರ್ಥಿಗೆ ತಮ್ಮ ಬೆಂಬಲವಿಲ್ಲ ಎಂದು ಪುನರುಚ್ಛರಿಸಿದ್ದಾರೆ.
Vijaya Karnataka Web mandyas rebels not attend to rahul gandhis conference
ರಾಹುಲ್‌ ಸಮಾವೇಶಕ್ಕೂ ಬಾರದ ‘ಮಂಡ್ಯದ ರೆಬೆಲ್ಸ್‌’


ಮಾಜಿ ಸಚಿವರಾದ ಕಾಂಗ್ರೆಸಿನ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್‌.ನಗರದಲ್ಲಿ ಶನಿವಾರ ಭಾಗವಹಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಸಮಾವೇಶದಿಂದಲೂ ಈ ಮೂವರು ನಾಯಕರು ದೂರ ಉಳಿದರು. ಕೆ.ಆರ್‌.ನಗರದ ಹೆಲಿಪ್ಯಾಡ್‌ನಲ್ಲಿ ರಾಹುಲ್‌ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಮಾತ್ರ ಈ ಮೂವರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಇಲ್ಲಿಯೂ ಅವರು ಬರಲಿಲ್ಲ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ನಾಗಮಂಗಲ ಹಾಗೂ ಮಳವಳ್ಳಿಯಲ್ಲಿ ಶುಕ್ರವಾರ ಭಾಗವಹಿಸಿದ್ದ ಜೆಡಿಎಸ್‌-ಕಾಂಗ್ರೆಸ್‌ ಜಂಟಿ ಸಮಾವೇಶಕ್ಕೆ ಈ ಮೂವರು ನಾಯಕರು ಹಾಜರಾಗಿರಲಿಲ್ಲ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಅನೇಕರು ನಡೆಸಿರುವ ಸಂಧಾನದ ಪ್ರಯತ್ನಗಳು ಫಲ ನೀಡಿಲ್ಲ .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ