ಆ್ಯಪ್ನಗರ

ಮಂಡ್ಯದಲ್ಲಿ ಕೊರೊನಾ ಉಲ್ಬಣ: ಸಂಸದೆ ಸುಮಲತಾ ನೇತೃತ್ವದಲ್ಲಿ ವಿಶೇಷ ಸಭೆ

ಮಂಡ್ಯದ ಸ್ವರ್ಣಸಂದ್ರ ಬಡಾವಣೆಗೆ ಗುರುವಾರ ಸಂಸದೆ ಸುಮಲತಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಧಿವೇಶನದ ಬಳಿಕ ಇಂದು ಮಂಡ್ಯಕ್ಕೆ ಆಗಮಿಸಿದ ಸಂಸದೆಯಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Vijaya Karnataka Web 16 Apr 2020, 1:47 pm
ಮಂಡ್ಯ: ನಗರದ ಸ್ವರ್ಣಸಂದ್ರ ಬಡಾವಣೆಗೆ ಗುರುವಾರ ಸಂಸದೆ ಸುಮಲತಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊರೊನಾ ಸೋಂಕಿತನಿಂದಾಗಿ ಸ್ವರ್ಣಸಂದ್ರ ಬಡಾವಣೆಗೆ ಕಂಟೋನ್ಮೆಂಟ್ ಪ್ರದೇಶವಾಗಿ ಪರಿಣಮಿಸಿದೆ. ಅಧಿವೇಶನದ ಬಳಿಕ ಇಂದು ಮಂಡ್ಯಕ್ಕೆ ಆಗಮಿಸಿದ ಸಂಸದೆಯಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Vijaya Karnataka Web sumalatha


ಅಧಿಕಾರಿಗಳಿಂದ ಬಡಾವಣೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಪರಿಶೀಲನೆ ವೇಳೆ ಬಡಾವಣೆ ನಿವಾಸಿಗಳಿಂದ ಸಮಸ್ಯೆ ಆಲಿಸಿದರು. ವೈದ್ಯಕೀಯ ಮಾಸ್ಕ್‌ ಬದಲು ಕರವಸ್ತ್ರವನ್ನೇ ಮುಖಕ್ಕೆ ಕಟ್ಟಿಕೊಂಡು ಸುಮಲತಾ ಅವರು ಬಡಾವಣೆಯಲ್ಲಿ ಸಂಚರಿಸಿದರು. ಸಂಸದೆಯೊಂದಿಗೆ ಡಿಸಿ ಸೇರಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು.

ಮುಂಜಾಗ್ರತಾ ಕ್ರಮಗಳ ಕುರಿತು ಸಭೆ:
ಕೊರೊನಾ ವೈರಸ್‌ (ಕೋವಿಡ್ 19) ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸುಮಲತಾ ಅವರು ಚರ್ಚೆ ನಡೆಸಿದರು. ಕೊರೋನಾ ವೈರಸ್ ಕುರಿತು ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಸಿಇಓ ಯಾಲಕ್ಕಿಗೌಡ, ಎಸ್.ಪಿ.ಪರಶುರಾಮ್, ಭಾಗಿಯಾಗಿದ್ದರು.

ಕೊರೊನಾ ಪರಿಹಾರ: ಬಿಎಸ್‌ವೈ ಭೇಟಿ ಮಾಡಲು ಕಾಂಗ್ರೆಸ್ ಮುಖಂಡರ ನಿರ್ಧಾರ

ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11ಕ್ಕೇರಿದೆ.

ಕಲಬುರಗಿ ಯುವಕನಿಂದ ಏಕಕಾಲಕ್ಕೆ ಇಬ್ಬರಿಗೆ ಆಮ್ಲಜನಕ ಒದಗಿಸುವ ವೆಂಟಿಲೇಟರ್‌ ವಿನ್ಯಾಸ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ