ಆ್ಯಪ್ನಗರ

ಸಂಚಾರಿ ನಿಯಮ ಉಲ್ಲಂಘಿಸಿದರೆ ಕ್ರಮ

ಸಂಚಾರಿ ನಿಯಮವನ್ನು ಸರಿಯಾಗಿ ಪಾಲಿಸದಿದ್ದರೆ ಅಂತಹ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ವೃತ್ತ ನಿರೀಕ್ಷಕ ಸಿ.ಪಿ.ನವೀನ್ ತಿಳಿಸಿದರು.

Vijaya Karnataka 28 Oct 2017, 5:15 am
ಭಾರತೀನಗರ: ಸಂಚಾರಿ ನಿಯಮವನ್ನು ಸರಿಯಾಗಿ ಪಾಲಿಸದಿದ್ದರೆ ಅಂತಹ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ವೃತ್ತ ನಿರೀಕ್ಷಕ ಸಿ.ಪಿ.ನವೀನ್ ತಿಳಿಸಿದರು.
Vijaya Karnataka Web method of violation of traffic rules
ಸಂಚಾರಿ ನಿಯಮ ಉಲ್ಲಂಘಿಸಿದರೆ ಕ್ರಮ

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಗೂಡ್ಸ್ ಮತ್ತು ಆಟೋ ಚಾಲಕರಿಗೆ ಜಾಗೃತಿ ಮೂಡಿಸುವ ಸಭೆಯಲ್ಲಿ ಅವರು ಮಾತನಾಡಿದರು.

ಕಾನೂನಿನ ಸುವ್ಯವಸ್ಥೆಯನ್ನು ಪ್ರತಿಯಬ್ಬರು ಕಾಪಾಡಬೇಕು. ಚಾಲನಾ ಮತ್ತು ವಾಹನ ಪರವಾನಗಿ ಇಲ್ಲದೆ ವಾಹನ ಚಲಿಸಬಾರದು. ಕಡ್ಡಾಯವಾಗಿ ಸಮವಸ್ತ್ರ ಧರಿಸಿರಬೇಕು. ಯಾವುದೇ ಅನಾಹುತಕ್ಕೆ ಕಾರಣವಾಗಬಾರದು ಎಂದು ತಿಳಿಸಿದರು.

ಚಾಲಕರು ಅತ್ಯಂತ ಜವಾಬ್ದಾರಿ ಯಿಂದ ವರ್ತಿಸಬೇಕು. ಒಂದು ಕ್ಷಣ ಬೇಜಾಬ್ದಾರಿಗೆ ಅಮೂಲ್ಯ ಜೀವಗಳು ಬಲಿಯಾಗಬೇಕಾಗುತ್ತದೆ. ಆದ್ದರಿಂದ ಎಚ್ಚರಿಕೆ ನಿಮ್ಮಲಿರಬೇಕು. ಸಂಚಾರಿ ನಿಯಮ ಸರಿಯಾಗಿ ಪಾಲಿಸಿದರೆ ಯಾವುದೇ ಅಪಾಯಗಳು ಸಂಭವಿಸುವುದಿಲ್ಲ. ಚಾಲಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ನಿಮ್ಮನ್ನು ನಂಬಿ ಪ್ರಯಾಣಿಸುವ ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಮನೆ ತಲುಪಲು ನೀವು ಕ್ಷಣಕ್ಷಣವೂ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಇತ್ತೀಚೆಗೆ ಚಾಲಕರ ಅಜಾಗೃತೆಯಿಂದ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ಅರಿಯದೇ ಮೇಲಿಂದ ಮೇಲೆ ಅಂತಹ ಘಟನೆಗಳು ಮರುಕಳಿಸುತ್ತಿವೆ. ಅಂತಹ ಘಟನೆಗಳು ಮರುಕಳಿಸದಂತೆ ಚಾಲಕರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವು ದರಿಂದ ಅಪಾಯ ಹೆಚ್ಚಾಗುತ್ತದೆ. ಆದರೆ ಇದನ್ನು ಗಮನಿಸುವ ಯಾರೇಯಾಗಲಿ ಚಾಲಕ ಮಾಡುತ್ತಿರುವುದು ತಪ್ಪು ಎಂದು ಸ್ಥಳದಲ್ಲೇ ಪ್ರತಿಭಟಿಸಬೇಕು. ಇಲ್ಲದಿದ್ದರೆ ಚಾಲಕರು ನಾವು ಮಾಡಿದ್ದೇ ಸರಿ ಎಂದು ಮುಂದೆ ಸಾಗುತ್ತಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಜವಾಬ್ದಾರಿಯು ಜಾಗೃತವಾಗಿರಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ಅಯ್ಯನ್‌ಗೌಡ, ಸಹಾಯ ಸಬ್‌ಇನ್ಸ್‌ಪೆಕ್ಟರ್ ಗೋವಿಂದಪ್ಪ, ಸಿಬ್ಬಂದಿ ಕುಮಾರ್ ಸೇರಿದಂತೆ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ