ಆ್ಯಪ್ನಗರ

ಮಂಡ್ಯದಲ್ಲಿ ಕಲ್ಲುಗಣಿಗಾರಿಕೆಗೆ ಅಡ್ಡಿ, ದೇವೇಗೌಡರ ಆರೋಪಕ್ಕೆ ನಾರಾಯಣಗೌಡ ಸ್ಪಷ್ಟನೆ

ಮಂಡ್ಯದಲ್ಲಿ ಜೆಡಿಎಸ್‌ ಕಾರ್ಯಕರ್ತರೊಬ್ಬರಿಗೆ ರಾಜಕೀಯ ಉದ್ದೇಶದಿಂದ ಕಲ್ಲು ಗಣಿಗಾರಿಕೆಗೆ ಅಡ್ಡಿಪಡಿಸಲಾಗುತ್ತಿದೆ ಎಂಬ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಆರೋಪವನ್ನು ಸಚಿವ ನಾರಾಯಣ ಗೌಡ ನಿರಾಕರಿಸಿದ್ದಾರೆ.

Vijaya Karnataka Web 26 Jun 2020, 3:15 pm
ಮಂಡ್ಯ: ಮಂಡ್ಯದ ಕೆ.ಆರ್‌ ಪೇಟೆಯಲ್ಲಿ ಜೆಡಿಎಸ್‌ ಕಾರ್ಯಕರ್ತರೊಬ್ಬರಿಗೆ ರಾಜಕೀಯ ಕಾರಣದಿಂದ ಕಲ್ಲುಗಣಿಕಾರಿಕೆ ನಡೆಸಲು ಅಡ್ಡಿ ಪಡಿಸಲಾಗುತ್ತಿದೆ ಎಂಬ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಆರೋಪವನ್ನು ಸಚಿವ ನಾರಾಯಣ ಗೌಡ ನಿಕಾಕರಿಸಿದ್ದಾರೆ.
Vijaya Karnataka Web narayana gowda


ಗುರುವಾರ ಈ ಕುರುತಾಗಿ ದೇವೇಗೌಡರು ಗಂಭೀರ ಆರೋಪವನ್ನು ಮಾಡಿದ್ದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನಾರಾಯಣ ಗೌಡ ದೇವೇಗೌಡರು ನನಗೆ ತಂದೆ ಸಮಾನ. ಅವರಿಂದಲೇ ರಾಜಕೀಯದಲ್ಲಿ ಬೆಳೆದವನು. ಅವರ ಮಾತನ್ನ ಆಶೀರ್ವಾದ ಎಂದು ಭಾವಿಸುತ್ತೇನೆ.

ಸಚಿವರೊಬ್ಬರಿಂದ ದ್ವೇಷದ ರಾಜಕೀಯ, ಸಿಎಂ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್‌ಡಿಡಿ ಎಚ್ಚರಿಕೆ

ಆದರೆ ಕಲ್ಲುಗಣಿಗಾರಿಕೆ ವಿಚಾರದಲ್ಲಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ತಕ್ಷಣ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಬಳಿಕ ದೇವೇಗೌಡರು ಸಮಯ ನೀಡಿದರೆ ಅವರ ಹೇಳಿದ ಸ್ಥಳಕ್ಕೆ ಹೋಗಿ ಮಾಹಿತಿ ಒದಗಿಸುತ್ತೇನೆ. ಆದ್ರೆ ಮಾಜಿ ಪ್ರಧಾನಿಯಾದ ಗೌಡರು ಪ್ರತಿಭಟನೆಗೆ ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದ್ದಾರೆ.

ಮಂಜು ಎನ್ನುವವರು ಎರಡು ಕ್ವಾರಿಗೆ ಪರವಾನಿಗೆ ಪಡೆದಿದ್ದರು. ಆದ್ರೆ 9 ಕೋಟಿ ರೂ. ರಾಯಲ್ಟಿ ಬಾಕಿ ಉಳಿಸಿಕೊಂಡಿದ್ದಾರೆ. ಜೊತೆಗೆ ಕ್ವಾರಿಯಿಂದ ಸಾಹುಕಾರ್ ಚನ್ನಯ್ಯ ನಾಲೆಗೆ ಧಕ್ಕೆಯಾಗಿತ್ತು. ವಾರಗಳ ಕಾಲ ನೀರು ನಿಲ್ಲಿಸಿ, ನಾಳೆ ದುರಸ್ತಿ ಮಾಡಿಸಲಾಗಿತ್ತು. ಇದೆಲ್ಲವು ಕುಮಾರಸ್ವಾಮಿ ಅವರ ಸರಕಾರ ಇದ್ದಾಗಲೇ ಆಗಿತ್ತು. ಆ ಸಂದರ್ಭದಲ್ಲೇ ಕ್ವಾರಿಯನ್ನ ನಿಲ್ಲಿಸಲು ಆದೇಶ ಮಾಡಲಾಗಿತ್ತು. ಈ ಎಲ್ಲ ವಿಚಾರವನ್ನು ದೇವೇಗೌಡರ ಗಮನಕ್ಕೆ ತರಲಿಲ್ಲ. ಹಾಗಾಗಿ ದೇವೇಗೌಡರು ಆರೋಪ ಮಾಡಿದ್ದಾರೆ ಅಷ್ಟೆ ಎಂದರು.

ಜಿಲ್ಲೆಯ ಎಲ್ಲ ಶಾಸಕರಿಗೂ ಈ ವಿಚಾರ ತಿಳಿದಿದೆ. ಪುಟ್ಟರಾಜು ಅವರು ಉಸ್ತುವಾರಿ ಸಚಿವರಾಗಿದ್ದರು. ಅವರಿಗೂ ಮಾಹಿತಿ ಇದೆ. ದೇವೇಗೌಡರ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಕರೆದು ಸಭೆ ಮಾಡುತ್ತಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ಮುಖ್ಯಮಂತ್ರಿಗಳಿಗೆ ನೀಡುತ್ತೇನೆ. ಗಣಿ ಇಲಾಖೆ ಸಚಿವರ ಗಮನಕ್ಕೂ ತರುತ್ತೇನೆ. ಬಳಿಕ ದೇವೇಗೌಡರಿಗೂ ಮಾಹಿತಿ ಒದಗಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ