ಆ್ಯಪ್ನಗರ

ಧೂಮಪಾನ ಮಾಡಬೇಡಿ, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂದ ನಾರಾಯಣ ಗೌಡ

ಕೊರೊನಾ ಹಿನ್ನೆಲೆಯಲ್ಲಿ ಯಾರೂ ಧೂಮಪಾನ ಮಾಡಬೇಡಿ, ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂದು ಸಚಿವ ನಾರಾಯಣ ಗೌಡ ಜನರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 3 Jun 2020, 1:32 pm
ಮಂಡ್ಯ: ಕೊರೊನಾ ಸಂಕಷ್ಟದ ಅವಧಿಯಲ್ಲಿ ಯಾರೂ ಧೂಮಪಾನ ಮಾಡಬೇಡಿ ಇದರಿಂದ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Vijaya Karnataka Web narayana gowda


ಮಂಡ್ಯದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಯಾರೂ ಕೂಡ ಮದ್ಯಪಾನ ಹಾಗೂ ಧೂಮಪಾನ ಮಾಡಬೇಡಿ. ಇದರಿಂದ ಇಮ್ಯುನಿಟಿ ಪವರ್ ಕಡಿಮೆ ಆಗತ್ತೆ. ಆರೋಗ್ಯಯುತ ಜೀವನಕ್ಕೂ ಇದು ಮಾರಕ. ಹೀಗಾಗಿ ಇಂತ ದುಶ್ಚಟಗಳಿಂದ ದೂರವಿರಿ ಎಂದು ಮನವಿ ಮಾಡಿದ್ದಾರೆ.

ಸೋಮಣ್ಣ ಯಾವ ಆರ್ಥಿಕ ತಜ್ಞ? - ವಸತಿ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ

ಮಂಡ್ಯ ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ.

ತೀರಾ ಅಗತ್ಯವಿರುವ ಕೋವಿಡ್ -19 ಟೆಸ್ಟಿಂಗ್ ಲ್ಯಾಬ್ ಅನ್ನು ಕೆಲವೇ ದಿನಗಳಲ್ಲಿ ನಿರ್ಮಿಸಿದ್ದಾರೆ. ಇಷ್ಟು ದಿನ ಟೆಸ್ಟಿಂಗ್ ರಿಪೋರ್ಟ್ ಗಾಗಿ ಒಂದೆರಡು ದಿನ ಕಾಯಬೇಕಾಗುತ್ತಿತ್ತು. ಈಗ 24 ಗಂಟೆಯಲ್ಲಿ ವರದಿ ಸಿಗಲಿದೆ. ಟೆಸ್ಟಿಂಗ್ ಗೆ ಬೇಕಾದ ಅಗತ್ಯ ಹಣವನ್ನು ಸರ್ಕಾರ ಭರಿಸಲು ಸಿದ್ದವಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಲ್ಲದೆ ಮೈಶುಗರ್ ಸಕ್ಕರೆ ಕಾರ್ಖಾನೆ ಸಂಬಂಧ ಸಿಎಂ ಜೊತೆ ಮಾತನಾಡಲಾಗಿದೆ. ಖಾಸಗಿಯವರಿಗೆ ಕೊಡುವುದು ಬೇಡ ಎಂದು ಸಿಎಂ ಬಳಿ ಮನವಿ ಮಾಡಿದ್ದೆ, ಅಂತೆಯೆ ಖಾಸಗಿಗೆ ಕೊಡುವ ನಿರ್ಧಾರ ಕೈ ಬಿಡಲಾಗಿದೆ. ಸರ್ಕಾರವೇ ನಡೆಸಬೇಕಾ ಅಥವಾ O and M ಗೆ ಕೊಡಬೇಕಾ ಅನ್ನೋದನ್ನ ಸಿಎಂ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ