ಆ್ಯಪ್ನಗರ

ಪ್ರತಿಭಾ ಪುರಸ್ಕಾರ ಮಕ್ಕಳ ಸಾಧನೆಗೆ ಪ್ರೇರಣೆ

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಸಿ.ರಮೇಶ್ ತಿಳಿಸಿದರು.

ವಿಕ ಸುದ್ದಿಲೋಕ 3 Jul 2017, 5:15 am
ಮಂಡ್ಯ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಸಿ.ರಮೇಶ್ ತಿಳಿಸಿದರು.
Vijaya Karnataka Web pratibha puraskar inspires childrens achievement
ಪ್ರತಿಭಾ ಪುರಸ್ಕಾರ ಮಕ್ಕಳ ಸಾಧನೆಗೆ ಪ್ರೇರಣೆ


ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಜಿಲ್ಲಾ ಸಮಿತಿಯು 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ‌್ಯಕ್ರಮ ದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಪ್ರತಿಭಾ ಪುರಸ್ಕಾರ ಕಾರ‌್ಯಕ್ರಮವನ್ನು ಐದು ಜಿಲ್ಲೆಯ ಪದಾಧಿಕಾರಿಗಳು ಒಗ್ಗೂಡಿ ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ಕಾರ‌್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತೀರ್ಣಗೊಂಡ 130ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿದ್ದೇವೆ ಎಂದರು.

ಪ್ರತಿಭಾವಂತ ವಿದ್ಯುತ್ ಗುತ್ತಿಗೆದಾರರ ಮಕ್ಕಳನ್ನು ಗುರುತಿಸಿ ಗೌರವಿಸುವ ಕಾರ‌್ಯಕ್ರಮವನ್ನು ರೂಪಿಸಿಕೊಂಡಿ ದ್ದೇವೆ. ಸಾಧನೆ ಮಾಡಿರುವ ವಿದ್ಯುತ್ ಗುತ್ತಿಗೆದಾರರಿಗೂ ಸನ್ಮಾನ ಮಾಡುವ ಮೂಲಕ ಪ್ರೋತ್ಸಾಹಿಸುತ್ತಿದ್ದೇವೆ ಎಂದರು.

ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಎ.ಎನ್. ದಿನೇಶ್, ಪ್ರಧಾನ ಕಾರ‌್ಯನಿರ್ವಾಹಕ ಅಭಿಯಂತರ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಪರಮೇಶ್, ಕಷ್ಣೇಗೌಡ, ಜಿಲ್ಲಾ ಕಾರ‌್ಯದರ್ಶಿ ಎಸ್.ಡಿ. ಮುರಳೀಧರ್, ಅಶೋಕ್, ಮಹದೇವು, ಕಲೀಲ್ ಅಹಮದ್, ಹೊನ್ನೇಗೌಡ, ಸಿದ್ದು, ಕೇಂದ್ರ ಸಮಿತಿ ಪದಾಧಿಕಾರಿಗಳಾದ ರುದ್ರೇಶ್, ಎಚ್.ವಿ. ಚಂದ್ರಬಾಬು, ಶ್ಯಾಂಸುಂದರ್, ನಾಗರಾಜು, ವಸಂತು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ