ಆ್ಯಪ್ನಗರ

ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಆಕ್ರೋಶ

ವಿಕ ಸುದ್ದಿಲೋಕ ಮದ್ದೂರು ಕಾಂಗ್ರೆಸ್‌ನ ಪ್ರಭಾವಿ ಮುಖಂಡ, ಮಾಜಿ ಸಚಿವ ಡಿಕೆ...

Vijaya Karnataka 5 Sep 2019, 5:00 am
ಮದ್ದೂರು: ಕಾಂಗ್ರೆಸ್‌ನ ಪ್ರಭಾವಿ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಕ್ರಮ ಖಂಡಿಸಿ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರೂ ಸೇರಿದಂತೆ ನಾನಾ ಸಂಘಟನೆ ಪದಾಧಿಕಾರಿಗಳು ಹೆದ್ದಾರಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
Vijaya Karnataka Web protest against central government by congress workers
ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಆಕ್ರೋಶ


ಪಟ್ಟಣದ ಪ್ರವಾಸಿ ಮಂದಿರದ ಬಳಿಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತ ಹಾಗೂ ಕೊಪ್ಪ ವೃತ್ತದ ಬಳಿ ಜಮಾಯಿಸಿದ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಯುವ ಕಾಂಗ್ರೆಸ್‌ ಸಮಿತಿ ಪದಾಧಿಕಾರಿಗಳು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾನಾ ಸಂಘಟನೆಗಳು ಮೈಸೂರು, ಬೆಂಗಳೂರು ಹೆದ್ದಾರಿ ತಡೆ ನಡೆಸಿ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ ಹಾಗೂ ಉಪಮುಖ್ಯಮಂತ್ರಿ ಲಕ್ಷತ್ರ್ಮಣ್‌ ಸವದಿ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಮತ್ತು ರಾಜ್ಯದಲ್ಲಿಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಐಟಿ ಹಾಗೂ ಇಡಿ ಅಧಿಕಾರಿಗಳನ್ನು ಕೇಂದ್ರ ಸರಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್‌ ಪ್ರಭಾವಿ ಮುಖಂಡರಾದ ಮಾಜಿ ಗೃಹ ಸಚಿವ ಪಿ. ಚಿದಾಂಬರ್‌ ಬಂಧನದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದ್ವೇಷದ ರಾಜಕಾರಣ, ಅಧಿಕಾರದ ಆಸೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಲಾಢ್ಯ ವಿರೋಧ ಪಕ್ಷದ ನಾಯಕರನ್ನು ಇಡಿ ಮತ್ತು ಐಟಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ತನಿಖೆ ಅಸ್ತ್ರ ಪ್ರಯೋಗಿಸುತ್ತಿರುವುದು ಖಂಡನೀಯ. ರಾಜ್ಯದ ಕೆಲ ಮಂತ್ರಿಗಳು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದು, ಬಿಜೆಪಿ ನಾಯಕರಿಗೆ ತಾವು ಯಾವ ಮಾರ್ಗದಲ್ಲಿಅಧಿಕಾರಕ್ಕೆ ಬಂದವೆಂದು ಕನಿಷ್ಠ ಜ್ಞಾನವೂ ಇಲ್ಲದಂತಾಗಿದೆ. ವಿಧಾನ ಸೌಧದಲ್ಲಿನೀಲಿ ಚಿತ್ರ ನೀಡಿದವರಿಗೆ ಹಾಗೂ ಚೆಕ್‌ ಮೂಲಕ ಲಂಚ ಪಡೆದವರನ್ನು ನಾಯಕನ್ನರಾಗಿ ಆಯ್ಕೆ ಮಾಡಿಕೊಂಡಿರುವವರು ಡಿ.ಕೆ. ಶಿವಕುಮಾರ್‌ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಬರ ಮತ್ತು ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತರಿಗೆ ಕೇಂದ್ರ ಸರಕಾರದಿಂದ ನೆರೆ ಪರಿಹಾರ ಕೊಡಿಸಲು ಮುಂದಾಗದಿರುವ ಬಿಜೆಪಿ ನಾಯಕರು ವಿರೋಧ ಪಕ್ಷದವರನ್ನು ತುಳಿಯಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆಂದು ದೂರಿದರು. ಕೂಡಲೇ ಬಂಧಿಸಿರುವ ಡಿ.ಕೆ. ಶಿವಕುಮಾರ್‌ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿಮುಂದಾಗುವ ಅನಾಹುತಕ್ಕೆ ಕೇಂದ್ರ ಮತ್ತು ರಾಜ್ಯ ಸರಕರಗಳೇ ನೇರ ಹೊಣೆಯಾಗಲಿವೆ ಎಂದು ಎಚ್ಚರಿಕೆ ನೀಡಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ.ಅಮರ್‌ಬಾಬು, ನಾಡ ಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಸೊಸೈಟಿ ಸಿದ್ದೇಗೌಡ, ಉಪಾಧ್ಯಕ್ಷ ಸಿ.ಎಸ್‌.ಶಂಕರಯ್ಯ, ಕಾರ್ಯದರ್ಶಿ ಸಿ.ಸುರೇಶ್‌, ಮಾರಸಿಂಗನಹಳ್ಳಿ ರಾಮಚಂದ್ರು, ಪದಾಧಿಕಾರಿಗಳಾದ ಡಿ.ಪಿ. ಶಿವಪ್ಪ, ತಿಪ್ಪೂರು ರಾಜೇಶ್‌, ಮುಖಂಡರಾದ ಮನುಕುಮಾರ್‌, ಕೂಳಗೆರೆ ಶೇಖರ್‌, ಅಜ್ಜಹಳ್ಳಿ ರಾಮಕೃಷ್ಣ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ