ಆ್ಯಪ್ನಗರ

ರಸ್ತೆ ಸುರಕ್ಷತೆ ಪಾಲಿಸಿ: ಅಪಘಾತ ತಪ್ಪಿಸಿ

ಮದ್ದೂರು: ಪ್ರತಿಯೊಬ್ಬರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವುದರಿಂದ ಅನಾಹುತಗಳನ್ನು ತಪ್ಪಿಸಬಹುದು ಎಂದು ಕೆಸ್ತೂರು ಪೊಲೀಸ್‌ ಠಾಣೆಯ ಮುಖ್ಯಪೇದೆ ಅನಿಲ್‌ ಹೇಳಿದರು.

Vijaya Karnataka 6 Aug 2018, 5:00 am
ಮದ್ದೂರು: ಪ್ರತಿಯೊಬ್ಬರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವುದರಿಂದ ಅನಾಹುತಗಳನ್ನು ತಪ್ಪಿಸಬಹುದು ಎಂದು ಕೆಸ್ತೂರು ಪೊಲೀಸ್‌ ಠಾಣೆಯ ಮುಖ್ಯಪೇದೆ ಅನಿಲ್‌ ಹೇಳಿದರು.
Vijaya Karnataka Web road safety policy avoid accident
ರಸ್ತೆ ಸುರಕ್ಷತೆ ಪಾಲಿಸಿ: ಅಪಘಾತ ತಪ್ಪಿಸಿ


ತಾಲೂಕಿನ ಕೆಸ್ತೂರು ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ವಾಹನ ಚಾಲನೆ ಮಾಡುವಾಗ ಮದ್ಯಪಾನ, ಧೂಮಪಾನ ಹಾಗೂ ಮೊಬೈಲ್‌ನಲ್ಲಿ ಸಂಭಾಷಣೆ ನಡೆಸುವುದು ಅಪಘಾತಗಳಿಗೆ ಕಾರಣ. ಸಾರ್ವಜನಿಕರು ರಸ್ತೆ ಸುರಕ್ಷ ತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದರು.

ಪ್ರಭಾರ ಪ್ರಾಂಶುಪಾಲ ಪಾಪಯ್ಯ ಮಾತನಾಡಿ, ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಸಾಧನೆ ಮಾಡಬೇಕು. ಗುರಿ, ಏಕಾಗ್ರತೆ, ಶಿಸ್ತುಗಳನ್ನು ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕೆಂದರಲ್ಲದೇ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಉಪನ್ಯಾಸಕರಾದ ಸುರೇಂದ್ರಬಾಬು, ಎನ್‌. ಸಿದ್ಧ, ಶಾಂತಕುಮಾರಿ, ಸಿದ್ದರಾಮೇಗೌಡ, ರಮ್ಯ, ಹೊಂಬಾಳಯ್ಯ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ