ಆ್ಯಪ್ನಗರ

ಮಾನಸಿಕ ಖಿನ್ನತೆ: ಶ್ರೀರಂಗಪಟ್ಟಣ DYSP ಯೋಗಾನಂದ ಆತ್ಮಹತ್ಯೆ ಯತ್ನ

ಖಿನ್ನತೆಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದ್ದು, ತನಿಖೆ ಬಳಿಕವಷ್ಟೇ ಸತ್ಯ ಬಹಿರಂಗವಾಗಲಿದೆ.

Vijaya Karnataka Web 13 Oct 2019, 12:44 pm
ಮಂಡ್ಯ: ಆರೋಗ್ಯ ಸಮಸ್ಯೆಯಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀರಂಗಪಟ್ಟಣದ ಡಿವೈಎಸ್ಪಿ ಯೋಗೇಂದ್ರ ನಾಥ್(52) ಅವರು ಭಾನುವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Vijaya Karnataka Web Yoganand


ಶೀರಂಗಪಟ್ಟಣ ಹೊರವಲಯದ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ವಾಸವಿದ್ದ ಅವರು ತಮ್ಮ ಮನೆಯಲ್ಲೇ ಹರಿತವಾದ ಆಯುಧದಿಂದ ಮುಂಗೈನ ನರ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

1996 ರ ಬ್ಯಾಚಿನಲ್ಲಿ ಪಿಎಸ್ಐ ಆಗಿ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಿದ ಯೋಗೇಂದ್ರ ನಾಥ್ ಅವರು ಹಲವು ಜಿಲ್ಲೆಗಳಲ್ಲಿ ಪಿಎಸ್ಐ ಸರ್ಕಾರಿ ಕೆಲಸ ನಿರ್ವಹಿಸಿದ್ದರು. ಈ ನಡುವೆ ಬಡ್ತಿ ಯೊಂದಿಗೆ ಡಿವೈಎಸ್ಪಿ ಆಗಿದ್ದ ಯೋಗೇಂದ್ರ ಅವರು, ಕಳೆದ ಒಂದು ವರ್ಷದ ಹಿಂದಷ್ಟೇ ಶ್ರೀರಂಗಪಟ್ಟಣ ಡಿವೈಎಸ್ಪಿ ವರ್ಗಾವಣೆ ಬಂದಿದ್ದರು.

ಬಿಪಿ, ಶುಗರ್ ನ ಜೊತೆಗೆ ನೆನಪಿನ ಶಕ್ತಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಯೋಗೇಂದ್ರ ಅವರನ್ನು ಮೈಸೂರಿನ ನಾರಾಯಣ ಹೃದಯಾಲಯ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಯೋಗೇಂದ್ರ ನಾಥ್ ಅವರ ಕುಟುಂಬದವರೊಂದಿಗೆ ಸಮಾಲೋಚನೆ ನಡೆಸಿ, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದಾರೆ.

ಅಪಹರಣ ಡೀಲ್: ಆರೋಪಿ ಡಿವೈಎಸ್ಪಿ ಸಾವಿಗೆ ಶರಣು

ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಡಿವೈಎಸ್ಪಿ ಯೋಗೇಂದ್ರ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆತ್ಮಹತ್ಯೆ ಯತ್ನ ಸಂಬಂಧ ಮಾಹಿತಿ ಸಂಗ್ರಹಿಸಲಾಗುತ್ತಿದೆ- ಕೆ.ಪರಶುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ

ಕೈಗಾ ಅರಣ್ಯದಲ್ಲಿ ಒಂದು ರಾತ್ರಿ ಕಳೆದುಹೋಗಿದ್ದ ಡಿವೈಎಸ್‌ಪಿ ಶಂಕರ್‌ ಅವರ ರೋಚಕ ಅನುಭವ

ಯೋಗಾನಂದ ಅವರ ಆತ್ಮಹತ್ಯೆ ಯತ್ನ ಹಲವಾರು ಅನುಮಾನಗಳನ್ನು ಹುಟ್ಟಿಹಾಕಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆ ಭಾರಿ ಸಂಚಲನ ಮೂಡಿಸಿದ್ದ ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಮತ್ತು ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ