ಆ್ಯಪ್ನಗರ

ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಮಕರ ಸಂಕ್ರಮಣದಲ್ಲಿ ಸೂರ್ಯ ದಕ್ಷಿಣಾಯನದಿಂದ ಉತ್ತರಾಯನಕ್ಕೆ ಪಥ ಬದಲಿಸುವ ವೇಳೆ ಪಟ್ಟಣದ ಹೊರವಲಯದ ಚಂದ್ರವನ ಆಶ್ರಮದಲ್ಲಿರುವ ಐತಿಹಾಸಿಕ ಕಾಶಿ ...

Vijaya Karnataka 16 Jan 2019, 5:00 am
ಶ್ರೀರಂಗಪಟ್ಟಣ: ಮಕರ ಸಂಕ್ರಮಣದಲ್ಲಿ ಸೂರ್ಯ ದಕ್ಷಿಣಾಯನದಿಂದ ಉತ್ತರಾಯನಕ್ಕೆ ಪಥ ಬದಲಿಸುವ ವೇಳೆ ಪಟ್ಟಣದ ಹೊರವಲಯದ ಚಂದ್ರವನ ಆಶ್ರಮದಲ್ಲಿರುವ ಐತಿಹಾಸಿಕ ಕಾಶಿ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದ ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು ಸೂರ‍್ಯನ ಕಿರಣಗಳು ಪ್ರತಿ ವರ್ಷದಂತೆ ಈ ವರ್ಷವೂ ಸ್ಪರ್ಶಿಸಿದವು.
Vijaya Karnataka Web sun light touch shivalinga makara sankranthi celebration in srirangapattana
ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ


ದಕ್ಷಿಣ ಕಾವೇರಿ ನದಿ ತೀರದಲ್ಲಿರುವ ಪುರಾಣ ಪ್ರಸಿದ್ಧ ಕಾಶಿ ಚಂದ್ರಮೌಳೇಶ್ವರ ದೇವಾಲಯದಲ್ಲಿ ಬೆಳಗ್ಗೆ ಸುಮಾರು 7.15 ಗಂಟೆ ಸಮಯದಲ್ಲಿ ಪ್ರಥಮ ಸೂರ‍್ಯರಶ್ಮಿ ಕಿರಣಗಳು ಶಿವಲಿಂಗವನ್ನು ಸ್ಪರ್ಶಿಸುತ್ತಿದ್ದಂತೆ ಅಪರೂಪದ ಕ್ಷ ಣಗಳನ್ನು ನೆರೆದಿದ್ದ ಭಕ್ತರು ಕಣ್ತುಂಬಿಕೊಂಡರು.

ಮಕರ ಸಂಕಾಂತ್ರಿ ಅಂಗವಾಗಿ ಸೂರ್ಯ ತನ್ನ ಪಥವನ್ನು ಬದಲಾಯಿಸುವ ಹಿನ್ನಲೆಯಲ್ಲಿ ಸೂರ್ಯನ ಕಿರಣಗಳು ಶಿವಲಿಂಗದ ಮೇಲೆ ಹಾದು ಹೋಗುವ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ನೂರಾರು ಭಕ್ತರು ಆಗಮಿಸಿದ್ದರು. ನದಿಯಲ್ಲಿ ಸ್ನಾನ ಮಾಡಿ ದರ್ಶನ ಪಡೆದರೆ ಪುಣ್ಯ ಲಭಿಸುತ್ತದೆ ಎನ್ನ ಪ್ರತೀತಿ ಇದೆ. ಹೀಗಾಗಿ ಪಟ್ಟಣ ಮಾತ್ರವಲ್ಲದೆ ಸುತ್ತ ಮುತ್ತಲ ಗ್ರಾಮಗಳ ಜನರು ಆಗಮಿಸಿ ದೇವರ ಕೃಪೆಗೆ ಪ್ರಾರ್ಥರಾದರು. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ನೇತೃತ್ವದಲ್ಲಿ ಚಂದ್ರಮೌಳೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಗೋ ಪೂಜೆ, ಎಳ್ಳು, ಬೆಲ್ಲ ಅರ್ಪಣೆ ಇತರ ಪೂಜಾ ಧಾರ್ಮಿಕ ಕೈಕರ್ಯಗಳು ನೆರದವು. ಪ್ರಸಾದ ವಿನಿಯೋಗ ನಡೆಯಿತು.

ಉದ್ಯಮಿ ಪೋತರಾಜ್‌, ಆಶ್ರಮದ ಕಾರ್ಯದರ್ಶಿ ಶಿವಕುಮಾರ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ