ಆ್ಯಪ್ನಗರ

ತಾತನಿಂದಲೇ ಮೊಮ್ಮಳ ಮೇಲೆ ಅತ್ಯಾಚಾರ

ತಾಲೂಕಿನ ಅರಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 70 ವರ್ಷದ ವ್ಯಕ್ತಿ 17 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka 4 Aug 2019, 5:00 am
ಶ್ರೀರಂಗಪಟ್ಟಣ : ತಾಲೂಕಿನ ಅರಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 70 ವರ್ಷದ ವ್ಯಕ್ತಿ 17 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web tatanindale mommala mele atyacara
ತಾತನಿಂದಲೇ ಮೊಮ್ಮಳ ಮೇಲೆ ಅತ್ಯಾಚಾರ


ಅಪ್ರಾಪ್ತ ಬಾಲಕಿ ಎಸ್ಸೆಸ್ಸೆಲ್ಸಿ ವರೆಗೆ ವಿದ್ಯಾಭ್ಯಾಸ ಮಾಡಿದ್ದು, ನಂತರ ಮನೆಯಲ್ಲಿಯೇ ಇದ್ದಳು. ಅಪ್ರಾಪ್ತ ಬಾಲಕಿಯ ತಾಯಿ ಗಂಡನನ್ನು ಕಳೆದುಕೊಂಡಿದ್ದು, ಪುತ್ರಿ ಹಾಗೂ ಪುತ್ರನ ಸಮೇತ ತಂದೆಯ ಮನೆಯಲ್ಲಿಯೇ ಬಂದು ಇದ್ದರು. ಪುತ್ರ ಗಾರೆ ಕೆಲಸಕ್ಕೆ ತೆರಳುತ್ತಿದ್ದ, ತಾಯಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು.

ಬಾಲಕಿ ಮನೆಯಲ್ಲಿಯೇ ಇರುತ್ತಿದ್ದಳು, ಇದ್ದಕ್ಕಿದ್ದಂತೆಯೇ ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿದ ತಾಯಿ ಮೈಸೂರು ಚೆಲುವಾಂಬ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಬಾಲಕಿ 4 ತಿಂಗಳ ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ತಾತ ಇದಕ್ಕೆ ಕಾರಣ ಎಂದು ಬಾಲಕಿ ಬಾಯಿ ಬಿಟ್ಟಿದ್ದಾಳೆ. ಮನೆಯಲ್ಲಿ ಒಬ್ಬಳೇ ಇದ್ದಾಗ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ತಿಳಿಸಿದ್ದಾಳೆ. ಸಂತ್ರಸ್ತ ಬಾಲಕಿ ತಾಯಿ ಈ ಸಂಬಂಧ ಅರಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಅಪ್ರಾಪ್ತ ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಿ ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತೆ ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ