ಆ್ಯಪ್ನಗರ

ಪಾರ್ಕಿಂಗ್ ಶುಲ್ಕ ಹೆಚ್ಚಳ ವಿರೋಧ: ಪ್ರತಿಭಟನೆ

ನಗರದ ರೈಲ್ವೆ ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕ ಹೆಚ್ಚಿಸಿ ರುವುದು ಮತ್ತು ಗುತ್ತಿಗೆದಾರರ ವರ್ತನೆ ಖಂಡಿಸಿ ರೈಲು ನಿಲ್ದಾಣದಲ್ಲಿ ನಾಗರಿಕರು ಭಾನುವಾರ ಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು. ಏಕಾಏಕಿ ಶುಲ್ಕ ಹೆಚ್ಚಿಸಿ ರುವುದರಿಂದ ಸಾರ್ವಜನಿಕರಿಗೆ ತೊಂದರೆ ಯಾಗಿದೆ ಎಂದು ಆರೋಪಿಸಿ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka Web 27 Jun 2016, 5:15 am
ಮಂಡ್ಯ: ನಗರದ ರೈಲ್ವೆ ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕ ಹೆಚ್ಚಿಸಿ ರುವುದು ಮತ್ತು ಗುತ್ತಿಗೆದಾರರ ವರ್ತನೆ ಖಂಡಿಸಿ ರೈಲು ನಿಲ್ದಾಣದಲ್ಲಿ ನಾಗರಿಕರು ಭಾನುವಾರ ಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು. ಏಕಾಏಕಿ ಶುಲ್ಕ ಹೆಚ್ಚಿಸಿ ರುವುದರಿಂದ ಸಾರ್ವಜನಿಕರಿಗೆ ತೊಂದರೆ ಯಾಗಿದೆ ಎಂದು ಆರೋಪಿಸಿ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web the increase in the parking fee for opposition protest
ಪಾರ್ಕಿಂಗ್ ಶುಲ್ಕ ಹೆಚ್ಚಳ ವಿರೋಧ: ಪ್ರತಿಭಟನೆ


ಗ್ರಾಮೀಣ ಭಾಗದಿಂದ ಬರುವ ಸಾವಿರಾರು ಪ್ರಯಾಣಿಕರು ಹತ್ತು ವರ್ಷದಿಂದ ರೈಲ್ವೆ ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ. ಆ ವೇಳೆ ಪ್ರತಿ ವಾಹನಕ್ಕೆ ಶುಲ್ಕದ ರೂಪದಲ್ಲಿ 5 ರೂ. ಪಡೆಯಲಾಗುತ್ತಿತ್ತು. ಆದರೀಗ ಶುಲ್ಕದ ಮೊತ್ತವನ್ನು ಏಕಾಏಕಿ 10 ರೂ.ಗೆ ಹೆಚ್ಚಿಸಲಾಗಿದೆ. ಇದು ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ದರು.ವಾಹನ ನಿಲುಗಡೆ ಮಾಡಲು ಬರುವ ಮಹಿಳೆಯರು, ವೃದ್ಧರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಆರೋಪಿಸಿದರು. ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶ್ಯಾನ್ ಮೋಹನ್, ನವೀನ್, ಶಿವಕುಮಾರ್, ಮೋಹನ್‌ಕುಮಾರ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ