ಆ್ಯಪ್ನಗರ

ಹೆಣ್ಣುಮಕ್ಕಳ ಸಂಖ್ಯೆ ಕ್ಷೀಣಿಸಲು ಭ್ರೂಣಹತ್ಯೆಯೇ ಕಾರಣ

ಭ್ರೂಣಹತ್ಯೆಯಿಂದಾಗಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಿವ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಕ ಸುದ್ದಿಲೋಕ 29 Feb 2016, 3:00 am
ಭಾರತೀನಗರ: ಭ್ರೂಣಹತ್ಯೆಯಿಂದಾಗಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಿವ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
Vijaya Karnataka Web the number of girls due to the decline bhrunahatyeye
ಹೆಣ್ಣುಮಕ್ಕಳ ಸಂಖ್ಯೆ ಕ್ಷೀಣಿಸಲು ಭ್ರೂಣಹತ್ಯೆಯೇ ಕಾರಣ


ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ 1994ರ ಖಾಯ್ದೆ ಕುರಿತು ‘ಬೇಟಿ ಬಚಾವೋ- ಬೇಬಿಪಡಾವೋ’ ತಾಲ್ಲೂಕು ಮಟ್ಟದ ಕಾರ್ಯಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

2014 ರಲ್ಲಿ ಕೇಂದ್ರ ಸರಕಾರ ಮೊದಲ ಕಂತಿನಲ್ಲಿ 100 ಕೋಟಿ ವೆಚ್ಚದಲ್ಲಿ ಪ್ರಸವ ಪೂರ್ವ ಮತ್ತು ಗರ್ಭ ಪೂರ್ವ ಲಿಂಗಪತ್ತೆ ಕಾರ್ಯಕ್ರಮ ರೂಪಿಸಿದೆ. ಇದಕ್ಕೂ ಮೊದಲು 2004ರಲ್ಲಿ ಮಾಡಿದ ಕಾನೂನು ಭ್ರೂಣಲಿಂಗ ಪತ್ತೆ ಮಾಡುವವರ ವಿರುದ್ಧ ಕಠಿಣ ಶಿಕ್ಷೆ ನೀಡುವುದಾಗಿತ್ತು ಎಂದು ವಿವರಿಸಿದರು.

ಹೀಗಿದ್ದರೂ ಅತ್ಯಾಚಾರಕ್ಕೊಳಗಾದ ಹೆಣ್ಣು ತನ್ನ ಭ್ರೂಣವನ್ನು ಉಳಿಸಿಕೊಳ್ಳಲು ಆಗದಿದ್ದ ಸಂದರ್ಭ ಅಂತಹ ಭ್ರೂಣಗಳನ್ನು ತೆಗೆದು ಹಾಕಲು 1971ರಲ್ಲಿ ಮಾಡಿದ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಆ ನಂತರ 1980-94ರಲ್ಲಿ ಮತ್ತೆ ಅದನ್ನು ತಿದ್ದುಪಡಿ ಮಾಡಿ ಅತ್ಯಾಚಾರಕ್ಕೊಳಗಾದವರು ತನ್ನ ಭ್ರೂಣವನ್ನು ಉಳಿಸಿಕೊಳ್ಳಲು ಇಲ್ಲದಿದ್ದಲ್ಲಿ ಅದನ್ನು ತೆಗೆದು ಹಾಕಲು ಅನುವು ಮಾಡಿಕೊಟ್ಟಿತು ಎಂದು ಹೇಳಿದರು.

ಸರಕಾರ ಕಾರ್ಯಕ್ರಮಗಳು ಯಶಸ್ವಿ ಯಾಗಬೇಕಾದರೆ ಅರಿವು ಹಾಗೂ ಜಾಗತಿ ಅಗತ್ಯ. ಇಂತಹ ಅರಿವನ್ನು ಮೂಡಿಸಲು ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಂಜೇಗೌಡ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಿರಂಜನ್, ಸಿಪಿಐ ಗೋಪಾಲ್, ಪಿಎಸ್‌ಐ ಪ್ರಶಾಂತ್, ಭಾರತೀನಗರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ವಿಮೋಚನ ಮಹಿಳಾ ವೇದಿಕೆಯ ಜಗನ್ನಾಥ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಶಿವಾನಂದ್ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ