ಆ್ಯಪ್ನಗರ

ಜೆಡಿಎಸ್‌ ಬಿಡುವ ಪ್ರಶ್ನೆಯೇ ಇಲ್ಲ: ಎಲ್‌ಆರ್‌ಎಸ್‌

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣತಮ್ಮಂದಿರಂತಿದ್ದು, ನಮ್ಮ ನಡುವಿನ ಸಣ್ಣ ಪುಟ್ಟ ವ್ಯತ್ಯಾಸಗಳನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ. ಆದರೆ, ನಾನು ಜೆಡಿಎಸ್‌ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ತಿಳಿಸಿದರು.

Vijaya Karnataka 28 Sep 2019, 5:00 am
ನಾಗಮಂಗಲ: ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣತಮ್ಮಂದಿರಂತಿದ್ದು, ನಮ್ಮ ನಡುವಿನ ಸಣ್ಣ ಪುಟ್ಟ ವ್ಯತ್ಯಾಸಗಳನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ. ಆದರೆ, ನಾನು ಜೆಡಿಎಸ್‌ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ತಿಳಿಸಿದರು.
Vijaya Karnataka Web there is no question leaving jds lrs
ಜೆಡಿಎಸ್‌ ಬಿಡುವ ಪ್ರಶ್ನೆಯೇ ಇಲ್ಲ: ಎಲ್‌ಆರ್‌ಎಸ್‌


ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಪಕ್ಷದ ಸಭೆಯಲ್ಲಿಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಿಧಿಸಿದಂತೆ ಪಟ್ಟಣದ ಪ್ರವಾಸಿಮಂದಿರಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ನನಗೂ ಕಾಂಗ್ರೆಸ್‌ ಸಭೆಗೂ ಯಾವುದೇ ಸಂಬಂಧವಿಲ್ಲ. ಆತ್ಮೀಯ ಸ್ನೇಹಿತರೊಬ್ಬರನ್ನು ಭೇಟಿಮಾಡುವ ಸಲುವಾಗಿ ನಾನು ಅಲ್ಲಿಗೆ ಹೋಗಿದ್ದ ವೇಳೆ ಅಲ್ಲಿ ಕಾಂಗ್ರೆಸ್‌ ಸಭೆ ನಡೆಯುತ್ತಿತ್ತು. ಅದನ್ನೇ ನೆಪ ಮಾಡಿಕೊಂಡು ಕೆಲ ಮಾಧ್ಯಮದವರು ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ,''ಎಂದರು.

''ನಾನು ಜೆಡಿಎಸ್‌ ಪಕ್ಷದಲ್ಲಿ ಸಕ್ರಿಯವಾಗಿದ್ದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರೇ ನಮ್ಮ ನಾಯಕರು. ಪಕ್ಷದ ವರಿಷ್ಠರು ಹಾಗೂ ತಮ್ಮ ನಡುವೆ ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ,'' ಎಂದರು.

ತಮ್ಮನ್ನು ಡಸ್ಟ್‌ಬಿನ್‌ಗೆ ಹೋಲಿಸಿದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವರಾಮೇಗೌಡ, ''ರೇವಣ್ಣ ನಮ್ಮ ನಾಯಕ ದೇವೇಗೌಡರ ಮಗ ಅಂತ ಸುಮ್ಮನಾಗಿದ್ದೀನಿ. ರೇವಣ್ಣ ಹಾಗೆ ಮಾತಾಡ್ತಾನೆ ಇರ್ತಾರೆ ಬಿಡಿ. ಆದರೂ ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ,''ಎಂದರು.

''ಕಳೆದ ಲೋಕಸಭಾ ಉಪ ಚುನಾವಣೆಯ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿದ್ದ ನನಗೆ ಜಿಲ್ಲೆಯ ಕಾಂಗ್ರೆಸ್ಸಿಗರು ಶೇ.80ರಷ್ಟು ಮತ ನೀಡಿದ್ದರು. ಆದರೆ, ಇತ್ತೀಚಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಸ್ಪಧಿರ್ಧಿಸಿದ್ದಾಗ ಅದೇ ಕಾಂಗ್ರೆಸ್ಸಿಗರು ಸ್ವಾಭಿಮಾನದ ಪರ ನಿಂತರು. ನಾನೂ ಸೇರಿದಂತೆ ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು, ಜಿಲ್ಲೆಯ ಎಲ್ಲ ಶಾಸಕರು ಜೊತೆಗೂಡಿ ನಿಖಿಲ್‌ಕುಮಾರಸ್ವಾಮಿ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ನಿಖಿಲ್‌ ಸೋಲಿಗೆ ನಾವು ಹೇಗೆ ಕಾರಣವಾಗುತ್ತೀವಿ,''ಎಂದು ಮರುಪ್ರಶ್ನೆ ಹಾಕಿದರು. ಮುಖಂಡರಾದ ಟಿ.ಕೃಷ್ಣಪ್ಪ, ಟಿ.ಕೆ.ರಾಮೇಗೌಡ, ಲಾರಿಚನ್ನಪ್ಪ ಗೋಷ್ಠಿಯಲ್ಲಿಹಾಜರಿದ್ದರು.

ಸಂಸದರು, ಜೋಡೆತ್ತುಗಳೆಲ್ಲಿ?
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಣಿಸಿಕೊಂಡಿದ್ದ ಜೋಡೆತ್ತುಗಳು ಈಗ ಜಿಲ್ಲೆಯ ರೈತರ ನೆರವಿಗೆ ಬರುತ್ತಿಲ್ಲ. ಜಿಲ್ಲೆಯಲ್ಲಿ ಕಬ್ಬು ಬೆಳೆದಿರುವ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಸ್ವಾಭಿಮಾನದ ಹೆಸರಿನಲ್ಲಿ ಗೆದ್ದು ಸಂಸದರಾಗಿರುವ ಸುಮಲತಾ ಹಾಗೂ ಚುನಾವಣೆ ಸಂದರ್ಭದಲ್ಲಿ ಜನರಿಗೆ ಭರವಸೆ ಕೊಟ್ಟಿದ್ದ ಜೋಡೆತ್ತುಗಳು ಈಗ ಎಲ್ಲಿಹೋಗಿವೆ ಎಂದು ತಿಳಿಯದಾಗಿದೆ. ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಸಂಸದರು ಹಾಗೂ ಜೋಡೆತ್ತುಗಳು ರೈತರ ನೆರವಿಗೆ ಬರಬೇಕೆಂದು ಸಂಸದೆ ಸುಮಲತಾ, ನಟರಾದ ದರ್ಶನ್‌ ಹಾಗೂ ಯಶ್‌ ಅವರನ್ನು ಪರೋಕ್ಷವಾಗಿ ಕುಟುಕಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ