ಆ್ಯಪ್ನಗರ

ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಡ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಪೈಪೋಟಿ ನೀಡಬೇಕೆಂಬ ಉದ್ದೇಶದಿಂದ ತರಬೇತಿ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಕಾರ‍್ಯದರ್ಶಿ ಪ್ರೊ.ಟಿ.ನಾಗೇಂದ್ರ ತಿಳಿಸಿದರು.

Vijaya Karnataka 22 Aug 2018, 5:00 am
ಮಂಡ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಪೈಪೋಟಿ ನೀಡಬೇಕೆಂಬ ಉದ್ದೇಶದಿಂದ ತರಬೇತಿ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಕಾರ‍್ಯದರ್ಶಿ ಪ್ರೊ.ಟಿ.ನಾಗೇಂದ್ರ ತಿಳಿಸಿದರು.
Vijaya Karnataka Web training for rural students
ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ


ತಾಲೂಕಿನ ಸುಂಡಹಳ್ಳಿ ಬಳಿ ಇರುವ ಕಾವೇರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 'ಆಂಡ್ರಾಯ್ಡ್‌ ಅಪ್ಲಿಕೇಷನ್‌ ಡೆವಲಪ್‌ಮೆಂಟ್‌ ಪೋ›ಗ್ರಾಂ' ತರಬೇತಿ ಕಾರಾರ‍ಯಗಾರದಲ್ಲಿ ಅವರು ಮಾತನಾಡಿದರು.

ಹಳ್ಳಿಯ ವಾತಾವರಣವಿರುವ ನಮ್ಮ ಕಾಲೇಜಿನಲ್ಲಿ ಬಹಳಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಪೈಪೋಟಿ ನೀಡಬೇಕು ಎಂಬ ನಿಟ್ಟಿನಲ್ಲಿ ಹಲವು ತರಬೇತಿ ನೀಡಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಮೊಬೈಲ್‌ನಲ್ಲಿ ಆಂಡ್ರಾಯ್ಡ್‌ ಅಪ್ಲಿಕೇಷನ್‌ ಪೋ›ಗ್ರಾಂ ಬಳಸುತ್ತಿದ್ದಾರೆ. ಪ್ರಪಂಚದಾದ್ಯಂತ ಸುಮಾರು 2 ಶತಕೋಟಿ ಜನರು ಈ ಆಂಡ್ರಾಯ್ಡ್‌ ಅಪ್ಲಿಕೇಷನ್‌ ಪೋ›ಗ್ರಾಂ ಬಳಕೆ ಮಾಡುತ್ತಿದ್ದಾರೆ. ಆಂಡ್ರಾಯ್ಡ್‌ ಅಪ್ಲಿಕೇಷನ್‌ ಡೆವಲಪ್‌ಮೆಂಟ್‌ ಪೋ›ಗ್ರಾಂ ತರಬೇತಿಯನ್ನು ಗೂಗಲ್‌ ಟ್ರೈನಿಂಗ್‌ ಪಡೆದಿರುವ ತರಬೇತುದಾರರು ತರಬೇತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಆಂಡ್ರಾಯ್ಡ್‌ ಡೆವಲಪ್‌ಮೆಂಟ್‌ ಪೋ›ಗ್ರಾಂ ತಂತ್ರಜ್ಞಾನ ಕುರಿತ ಮಾಹಿತಿ ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಾರ‍ಯಗಾರ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ತಂತ್ರಜ್ಞಾನ ಯುಗದಲ್ಲಿ ಆಂಡ್ರಾಯ್ಡ್‌ ಅಪ್ಲಿಕೇಷನ್‌ ಬಹಳಷ್ಟು ಮುಖ್ಯ. ಹೀಗಾಗಿ ಇಲ್ಲಿ ಪಡೆಯುವ ತರಬೇತಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೆಟ್ಟಿ ನಿಲ್ಲುವ ಶಕ್ತಿ ಪಡೆದು ಮುಂದೆ ನಾನಾ ಕಂಪನಿಗಳಲ್ಲಿ ಆಯ್ಕೆಯಾಗಲು ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.

ಗೂಗಲ್‌ ಸರ್ಟಿಫೈಡ್‌ ತರಬೇತುದಾರರಾದ ನಿತಿನ್‌ಕುಮಾರ್‌, ಡಿ.ಎನ್‌.ಸಚ್ಚಿನ್‌ ಕಾರ್ಯಾಗಾರ ನಡೆಸಿಕೊಟ್ಟರು. ಕಾಲೇಜಿನ ಅಧ್ಯಕ್ಷ ಪೊ›.ಡಿ.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.ಶ್ರೀಕಂಠಪ್ಪ, ಕಂಪ್ಯೂಟರ್‌ ವಿಭಾಗದ ಮುಖ್ಯಸ್ಥ ಪೊ›.ಹೇಮಚಂದರ್‌, ಸಹಾಯಕ ಪ್ರಾಧ್ಯಾಪಕರಾದ ಸಚಿತ್‌, ಸಂತೋಷ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ