ಆ್ಯಪ್ನಗರ

ವಾಹನ ಡಿಕ್ಕಿ: ಅಪರಿಚಿತ ಮಹಿಳೆ ಸಾವು

ಅಪರಿಚಿತ ಮಹಿಳೆ ಸಾವು ವಿಕ ಸುದ್ದಿಲೋಕ ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಅಪರಿಚಿತ ಮಹಿಳೆ ...

Vijaya Karnataka 7 Jul 2018, 5:00 am
ಮಂಡ್ಯ: ನಗರದ ಮಹಾವೀರ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಅಪರಿಚಿತ ಮಹಿಳೆ ಮೃತಪಟ್ಟಿದ್ದಾರೆ.
Vijaya Karnataka Web vehicle crash unknown woman dies in mandya
ವಾಹನ ಡಿಕ್ಕಿ: ಅಪರಿಚಿತ ಮಹಿಳೆ ಸಾವು


ಮೃತರು 40ರಿಂದ 45 ವರ್ಷದವಳಾಗಿದ್ದು, ಸಾಧಾರಣಾ ಶರೀರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, 152 ಸೆಂ.ಮೀ. ಎತ್ತರವಿದ್ದಾಳೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಈಕೆಗೆ ಮೈಸೂರು ಕಡೆಯಿಂದ ವೇಗವಾಗಿ ಬಂದಿರುವ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅಪರಿಚಿತ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮಂಡ್ಯ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ