ಆ್ಯಪ್ನಗರ

ಸಂತ್ರಸ್ತ ಮಹಿಳೆಗೆ ಸಚಿವ ಸಿಎಸ್ಪಿ ಸಾಂತ್ವನ

ಮಂಡ್ಯ: ಜೀತ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಮದ್ದೂರು ತಾಲೂಕಿನ ಬೆಕ್ಕಳಲೆ ಗ್ರಾಮದ ದಲಿತ ಮಹಿಳೆ ಜಾನಕಮ್ಮ ಅವರನ್ನು ಬುಧವಾರ ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

Vijaya Karnataka 27 Sep 2018, 5:00 am
ಮಂಡ್ಯ: ಜೀತ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಮದ್ದೂರು ತಾಲೂಕಿನ ಬೆಕ್ಕಳಲೆ ಗ್ರಾಮದ ದಲಿತ ಮಹಿಳೆ ಜಾನಕಮ್ಮ ಅವರನ್ನು ಬುಧವಾರ ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.
Vijaya Karnataka Web victim woman minister csp condolences
ಸಂತ್ರಸ್ತ ಮಹಿಳೆಗೆ ಸಚಿವ ಸಿಎಸ್ಪಿ ಸಾಂತ್ವನ


ನಗರದ ವಿದ್ಯಾನಗರದಲ್ಲಿರುವ ಸ್ವಾಧಾರ ಮಹಿಳಾ ವಸತಿಗೃಹದಲ್ಲಿ ವಾಸ್ತವ್ಯವಿರುವ ಜಾನಕಮ್ಮ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಸಚಿವರು, ಕೆಲವೊತ್ತು ನೊಂದ ಮಹಿಳೆಯೊಡನೆ ಮಾತುಕತೆ ನಡೆಸಿ ಸಾಂತ್ವನದ ಮಾತುಗಳನ್ನಾಡಿ ಧೈರ್ಯ ತುಂಬಿದರು. ಇದೇ ವೇಳೆ ಡಾ.ಕೆ.ಅನ್ನದಾನಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಬಿ.ಶ್ರೀನಿವಾಸ್‌, ಜೆಡಿಎಸ್‌ ಎಸ್ಟಿ-ಎಸ್ಸಿ ಘಟಕದ ಅಧ್ಯಕ್ಷ ಜಯರಾಂ ಹಾಜರಿದ್ದರು.

* ಜೀತ ಪ್ರಕರಣ ನನ್ನ ಗಮನಕ್ಕೆ ಬಂದ ಕೂಡಲೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಕರೆ ಮಾಡಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದೆ. ಈಗಾಗಲೇ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಶಾಸಕ ಡಾ.ಕೆ.ಅನ್ನದಾನಿ ಅವರು ಬೆಕ್ಕಳಲೆ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸಿ, ಅದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಮಹಿಳೆಗೆ ಸರಕಾರದಿಂದ ಸಿಗುವ ಸೌಲಭ್ಯ ದೊರಕಿಸಿಕೊಡಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಸಿಗಬಹುದಾದ ಸೌಲಭ್ಯಗಳು ಮತ್ತು ಉದ್ಯೋಗ ಕೊಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಮರುಕಳಿಸದಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕೆಂದು ಸೂಚಿಸಲಾಗಿದೆ.

-ಸಿ.ಎಸ್‌.ಪುಟ್ಟರಾಜು, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ