ಆ್ಯಪ್ನಗರ

ಶ್ರೀರಂಗಪಟ್ಟಣದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ವಿಜಯೋತ್ಸವ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯದ ರೈತರ 34 ಸಾವಿರ ಕೋಟಿ ರೂ...

Vijaya Karnataka 6 Jul 2018, 5:00 am
ಶ್ರೀರಂಗಪಟ್ಟಣ: ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ರಾಜ್ಯದ ರೈತರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್‌ ಕಾರ‍್ಯಕರ್ತರು ವಿಜಯೋತ್ಸವ ಆಚರಿಸಿದರು.
Vijaya Karnataka Web victory celebration by jds activists in srirangapatna
ಶ್ರೀರಂಗಪಟ್ಟಣದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ವಿಜಯೋತ್ಸವ


ಪಟ್ಟಣದ ಕುವೆಂಪು ಪುತ್ಥಳಿ ಎದುರು ಜಮಾವಣೆಗೊಂಡ ಕಾರ‍್ಯಕರ್ತರು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎ.ಎಸ್‌ ರವೀಂದ್ರ ಶ್ರೀಕಂಠಯ್ಯ ಪರ ಘೋಷಣೆ ಕೂಗಿ, ಪಟಾಕಿ, ಸಿಡಿಸಿದರು. ನಂತರ ಸಾರ್ವಜನಿಕರಿಗೆ ಸಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಜೆಡಿಎಸ್‌ ತಾಲೂಕು ಅಧ್ಯಕ್ಷ ಪೈ ಮುಕುಂದ ಮಾತನಾಡಿ, ''ರೈತರ ಸಾಲ ಮನ್ನಾ ಜತೆಗೆ ಶ್ರೀರಂಗಪಟ್ಟಣ ಕ್ಷೇತ್ರದ 39 ಗ್ರಾಮಗಳ ಕುಡಿಯುವ ನೀರು ಪೂರೈಕೆಗೆ 43 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಸಿದ್ಧ ಕೆಆರ್‌ಎಸ್‌ ಬೃಂದಾವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲು ಕಾರ‍್ಯ ಯೋಜನೆ ಸಿದ್ಧತೆಗಾಗಿ 5 ಕೋಟಿ ರೂ. ಅನುದಾನ ಘೋಷಿಸಿರುವುದಕ್ಕೆ'' ಹರ್ಷ ವ್ಯಕ್ತಪಡಿಸಿದರು. ಮುಖಂಡರಾದ ಅಗ್ರಹಾರನಿಂಗೇಗೌಡ, ಗಂಜಾಂಚಂದ್ರಶೇಖರ್‌, ಬಾಲು, ಕುಮಾರ್‌, ಜಯರಾಮು, ಪುರಸಭೆ ಸದಸ್ಯ ಎಸ್‌.ಟಿ.ರಾಜು, ಎಸ್‌.ಪ್ರಕಾಶ್‌, ರವೂಫ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ