ಆ್ಯಪ್ನಗರ

ಗುಂಡುಕಲ್ಲು ಎತ್ತಿ ಹಾಕಿ ಪತ್ನಿ ಕೊಲೆ: ಪತಿ ಸೆರೆ

ವಿಕ ಸುದ್ದಿಲೋಕ ಪಾಂಡವಪುರ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಮೇಲೆ ಗುಂಡುಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಪಟ್ಟಣದ ಬೀರಶೆಟ್ಟಹಳ್ಳಿ ...

Vijaya Karnataka 9 Aug 2019, 5:00 am
ಪಾಂಡವಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಮೇಲೆ ಗುಂಡುಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಪಟ್ಟಣದ ಬೀರಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web wife killed by his husband in pandavapura taluk
ಗುಂಡುಕಲ್ಲು ಎತ್ತಿ ಹಾಕಿ ಪತ್ನಿ ಕೊಲೆ: ಪತಿ ಸೆರೆ


ಪಟ್ಟಣದ ಉರ್ದು ಸರಕಾರಿ ಶಾಲೆಯ ಹಿಂಭಾಗದ ಕಾಲನಿ ನಿವಾಸಿ ಮಂಗಳಮ್ಮ(32) ಮೃತರು. ಕೊಲೆ ಮಾಡಿದ ಆರೋಪದ ಮೇಲೆ ಪತಿ ನಾರಾಯಣನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಮಂಗಳ ಹಾಗೂ ನಾರಾಯಣ ದಂಪತಿಗೆ ಮಕ್ಕಳಿಲ್ಲ. ಪಟ್ಟಣದ ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಗಳಮ್ಮ ಮಂಗಳವಾರ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗಿ ಮಲಗಿದ್ದ ಸಂದರ್ಭದಲ್ಲಿ ಪತಿ ನಾರಾಯಣ ಆಗಮಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಂಗಳಮ್ಮ ಅವರನ್ನು ಅಕ್ಕಪಕ್ಕದ ಮನೆಯವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮಂಗಳಮ್ಮ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸ್ಸುದಾರರಿಗೆ ಒಪ್ಪಿಸಲಾಗಿದೆ.

ಮಂಗಳಮ್ಮ ಸಹೋದರಿ ನೀಡಿದ ದೂರಿನ ಮೇರೆಗೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ