Please enable javascript.ಸುಳ್ಯ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ - ಸುಳ್ಯ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ - Vijay Karnataka

ಸುಳ್ಯ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ

ವಿಕ ಸುದ್ದಿಲೋಕ 13 Jan 2015, 5:36 am
Subscribe

ಇಲ್ಲಿನ ಶ್ರೀ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆದು ಭಾನುವಾರ ರಾತ್ರಿ ರಥೋತ್ಸವ ನಡೆಯಿತು. ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ ಆರಂಭಗೊಂಡ ಜಾತ್ರೆ ಸಾವಿರಾರು ಭಕ್ತಾದಿಗಳನ್ನು ತನ್ನತ್ತ ಆಕರ್ಷಿಸಿತು.

ಸುಳ್ಯ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ
ಸುಳ್ಯ: ಇಲ್ಲಿನ ಶ್ರೀ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆದು ಭಾನುವಾರ ರಾತ್ರಿ ರಥೋತ್ಸವ ನಡೆಯಿತು. ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ ಆರಂಭಗೊಂಡ ಜಾತ್ರೆ ಸಾವಿರಾರು ಭಕ್ತಾದಿಗಳನ್ನು ತನ್ನತ್ತ ಆಕರ್ಷಿಸಿತು.

ಭಾನುವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಕಲ್ಕುಡ ದೈವಗಳ ಉತ್ಸವ, ರಾತ್ರಿ ರಥೋತ್ಸವ ನಡೆಯಿತು. ಸೋಮವಾರ ಬೆಳಗ್ಗೆ ಆರಾಟ ಬಾಗಿಲು ತೆರೆದು, ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಭಾರದ್ವಾಜಾಶ್ರಮ ಅರಂಬೂರು ವೇದ ಪಾಠಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಬಜಪ್ಪಿಲ ದೈವಗಳ ಭಂಡಾರ ಬರುವುದು, ಉತ್ಸವ ಬಲಿ ಹೊರಟು ಪಟ್ಟಣ ಸವಾರಿ, ಆರಕ್ಷಕ ಠಾಣೆ ಕಟ್ಟೆಯಿಂದ ಗಾಂಧಿನಗರ, ಅರಣ್ಯ ಇಲಾಖೆ, ಕೇರ್ಪಳ, ತಾಲೂಕು ಕಚೇರಿ, ಪಯಸ್ವಿನಿ ನದಿ ಬಳಿ ಕಟ್ಟೆ ಪೂಜೆಗಳು, ಅವಭೃತ ಸ್ನಾನವಾಗಿ ಬಂದು ದರ್ಶನ ಬಲಿ, ಬಟ್ಟಲು ಕಾಣಿಕೆ, ಧ್ವಜಾವರೋಹಣ ನಡೆಯಿತು.

ರಥೋತ್ಸವದಲ್ಲಿ ಶಾಸಕ ಎಸ್. ಅಂಗಾರ, ತಾಪಂ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ನಪಂ ಅಧ್ಯಕ್ಷ ಎನ್.ಎ. ರಾಮಚಂದ್ರ, ತಹಸೀಲ್ದಾರ್ ಶ್ರೀನಿವಾಸ ಶೆಟ್ಟಿ, ಪೊಲೀಸ್ ವೃತ್ತ ನೀರೀಕ್ಷಕ ಸತೀಶ್, ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಎಂ. ಮೀನಾಕ್ಷಿ ಗೌಡ, ರಮೇಶ್ ಬೈಪಾಡಿತ್ತಾಯ, ಉಪೇಂದ್ರ ಕಾಮತ್, ಎನ್. ಜಯಪ್ರಕಾಶ್ ರೈ, ಆಡಳಿತ ಮೊಕ್ತೇಸರ ಗಿರಿಜಾಶಂಕರ ತುದಿಯಡ್ಕ, ಪ್ರೊ. ವಿದ್ಯಾಶಂಕರ ತುದಿಯಡ್ಕ, ಕೃಪಾಶಂಕರ ತುದಿಯಡ್ಕ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿರ್ದೇಶಕಿ ಶೋಭಾ ಚಿದಾನಂದ ಮತ್ತಿತರರು ಭಾಗವಹಿಸಿದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ