Please enable javascript.ದ.ಕ.ದಲ್ಲಿ 9 ವರ್ಷದಲ್ಲಿ 10,944 ಹೆಕ್ಟೇರ್ ಇಳಿಕೆ - ದ.ಕ.ದಲ್ಲಿ 9 ವರ್ಷದಲ್ಲಿ 10,944 ಹೆಕ್ಟೇರ್ ಇಳಿಕೆ - Vijay Karnataka

ದ.ಕ.ದಲ್ಲಿ 9 ವರ್ಷದಲ್ಲಿ 10,944 ಹೆಕ್ಟೇರ್ ಇಳಿಕೆ

ವಿಕ ಸುದ್ದಿಲೋಕ 24 Feb 2015, 5:21 am
Subscribe

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಭತ್ತದ ಕೃಷಿ ಇಳಿಮುಖವಾಗುತ್ತಿದೆ. ನೀರು, ಭೂಮಿ ಹಾಗೂ ಕೂಲಿ ಕಾರ್ಮಿಕರ ಕೊರತೆ ಸೇರಿದಂತೆ ನಾನಾ ಕಾರಣದಿಂದಾಗಿ ಭತ್ತದ ಕೃಷಿಯಲ್ಲಿ ಕೃಷಿಕರು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ.

 9 10944
ದ.ಕ.ದಲ್ಲಿ 9 ವರ್ಷದಲ್ಲಿ 10,944 ಹೆಕ್ಟೇರ್ ಇಳಿಕೆ
-ಬಿ. ರವೀಂದ್ರ ಶೆಟ್ಟಿ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಭತ್ತದ ಕೃಷಿ ಇಳಿಮುಖವಾಗುತ್ತಿದೆ. ನೀರು, ಭೂಮಿ ಹಾಗೂ ಕೂಲಿ ಕಾರ್ಮಿಕರ ಕೊರತೆ ಸೇರಿದಂತೆ ನಾನಾ ಕಾರಣದಿಂದಾಗಿ ಭತ್ತದ ಕೃಷಿಯಲ್ಲಿ ಕೃಷಿಕರು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ.

2005-06ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 56,025ಹೆಕ್ಟೇರ್ ವಿಸ್ತೀರ್ಣದಲ್ಲಿ ಭತ್ತ ಬೆಳೆಯಲಾಗಿತ್ತು. 2013-14ನೇ ಸಾಲಿನಲ್ಲಿ ಇದರ ಪ್ರಮಾಣ 45,081 ಹೆಕ್ಟೇರ್ ವಿಸ್ತೀರ್ಣ ಪ್ರದೇಶಕ್ಕೆ ಕುಸಿದಿದೆ. ಅಂದರೆ ಕಳೆದ 9 ವರ್ಷಗಳಲ್ಲಿ 10,944 ಹೆಕ್ಟೇರ್ ಪ್ರದೇಶದಷ್ಟು ಭೂಮಿಯಲ್ಲಿ ಭತ್ತ ಬೆಳೆಯುತ್ತಿಲ್ಲ. ಇದೇ ಪ್ರಮಾಣದಲ್ಲಿ ಇಳಿಮುಖವಾಗುತ್ತಾ ಹೋದರೆ, ಮುಂದೆ ಅಕ್ಕಿಗಾಗಿ ಹೊರಗಿನವರನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಉಂಟಾಗಬಹುದು. ದರ ಕೂಡ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಕೂಲಿ ಕಾರ್ಮಿಕರ ಕೊರತೆ, ಉತ್ಪಾದನಾ ವೆಚ್ಚ ಏರಿಕೆಯಾಗಿರುವುದರಿಂದ ಭತ್ತ ಬೆಳೆಯುವ ವಿಸ್ತೀರ್ಣ ವರ್ಷದಿಂದ ವರ್ಷಕ್ಕೆ ಇಳಿ ಮುಖವಾಗುತ್ತಿದೆ. ಇದು ಒಂದು ಕಾರಣ ವಾದರೆ, ಮುಂಗಾರು ಹಂಗಾಮಿನಲ್ಲಿ ಮಳೆ ಆಶ್ರಯದಲ್ಲಿ ಹಾಗೂ ಹಿಂಗಾರು ಹಂಗಾಮಿನಲ್ಲಿ ಬಾವಿ ನೀರಾವರಿ ಅವಲಂಬಿಸುವ ಪರಿಸ್ಥಿತಿ ಇದೀಗ ಇಲ್ಲವಾಗಿದೆ. ಸಮರ್ಪಕ ರೀತಿಯಲ್ಲಿ ಮಳೆಯಾಗದ ಕಾರಣ ಭತ್ತ ಕೃಷಿ ಸಾಧ್ಯವಾಗುತ್ತಿಲ್ಲ. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನೀರಿನ ಅಗತ್ಯದ ಸಂದರ್ಭ ಪಂಪ್ ಬಳಕೆ ಸಾಧ್ಯವಾಗುತ್ತಿಲ್ಲ. ಇದು ಕೂಡ ಭತ್ತ ಕೃಷಿಕರಲ್ಲಿ ನಿರಾಸಕ್ತಿ ಮೂಡಿಸಿದೆ.

ಜಲಾನಯನ ಇಲಾಖೆಯು ಕೃಷಿ ಇಲಾಖೆಯೊಂದಿಗೆ ವಿಲೀನಗೊಂಡು ಮೂರು ತಿಂಗಳಾಯಿತು. ಆದರೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ತೊಡಕಾಗಿರುವುದರಿಂದ ಜಲಾನ ಯನದ ಕಾಮಗಾರಿ ನಡೆಯುತ್ತಿಲ್ಲ ಎಂಬ ಆರೋಪವೂ ಇದೆ. ಆದರೆ ಕಾರ್ಯಕ್ರಮ ಅನು ಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಸಮಿತಿ, ಕಾರ್ಯ ಕ್ರಮ ಅನುಷ್ಠಾನ ಏಜೆನ್ಸಿ, ಜಲಾನಯನ ಕಾರ್ಯ ಕಾರಿ ಸಮಿತಿಗಳನ್ನು ಪುನರ್‌ರಚನೆ ಮಾಡಲಾಗಿದೆ.

‘ಕೃಷಿ ಯಾಂತ್ರೀಕರಣ ಯೋಜನೆಯಡಿ’ ತಾಲೂಕು ಮಟ್ಟದಲ್ಲಿ ಕೃಷಿಗೆ ಬಾಡಿಗೆ ಆಧಾರದಲ್ಲಿ ಯಂತ್ರೋಪಕರಣ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇದನ್ನು ಹೋಬಳಿ ಮಟ್ಟದಲ್ಲಿ ಸ್ಥಾಪನೆ ಮಾಡಬೇಕು ಎಂಬ ಬೇಡಿಕೆ ಇದೆ. ಈಗಾಗಲೇ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ ತಾಲೂಕು ಮಟ ್ಟ ದಲ್ಲಿ ಕೇಂದ್ರಗಳಿವೆ. ಸರಕಾರದ ಈ ಕ್ರಮ ಭತ್ತ ಬೆಳೆಗೆ ಪ್ರೋತ್ಸಾಹದಾಯಕವೇ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಭತ್ತದ ಉತ್ತೇಜನಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕೆ ಜಲಾನಯನ ಇಲಾಖೆಗೆ ನಿರ್ದೇಶನ ನೀಡುವುದಾಗಿ ಸಚಿವ ಕೃಷ್ಣ ಬೈರೇ ಗೌಡ ಹೇಳಿದ್ದಾರೆ. 2015-16ನೇ ಸಾಲಿನಲ್ಲಿ ಸರಕಾರವು ಒಟ್ಟು 557 ಹೋಬಳಿಗಳಲ್ಲಿ ಕೃಷಿ ಯಂತ್ರೋಪಕರಣ ಬಾಡಿಗೆ ಲಭ್ಯವಾಗುವ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ. ಅಂತರ್‌ಜಲ ಮಟ್ಟವನ್ನು ಏರಿಸಲು ನದಿಗಳಿಗೆ ಚೆಕ್‌ಡ್ಯಾಮ್ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದೇನೆ. -ಐವನ್ ಡಿಸೋಜ ವಿಧಾನ ಪರಿಷತ್ ಸದಸ್ಯ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ