ಆ್ಯಪ್ನಗರ

ಧರ್ಮಸ್ಥಳದಲ್ಲಿ 50ನೇ ವರ್ಷದ ಸಾಮೂಹಿಕ ವಿವಾಹ! ಹಸೆಮಣೆ ಏರಿದ 183 ಜೋಡಿ!

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು. ಒಟ್ಟು 183 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನೂತನ ವಧು-ವರರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಆಶೀರ್ವದಿಸಿದರು. ಕಾರ್ಯಕ್ರಮಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅತಿಥಿಯಾಗಿ ಬಂದಿದ್ದರು.

Edited byಅವಿನಾಶ ವಗರನಾಳ | Vijaya Karnataka Web 27 Apr 2022, 8:55 pm

ಹೈಲೈಟ್ಸ್‌:


  • ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
  • ಮಂಜುನಾಥನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 183 ಜೋಡಿ
  • ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಂದ ನೂತನ ವಧು-ವರರಿಗೆ ಆಶೀರ್ವಾದ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Dharmasthala
ಧರ್ಮಸ್ಥಳ (ದಕ್ಷಿಣ ಕನ್ನಡ): ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 183 ಜೋಡಿ ವಧು-ವರರು ಬುಧವಾರ ಸಂಜೆ 6.50ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನೂತನ ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು. 50ನೇ ವರ್ಷದ ಈ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿನಡೆಯಿತು.
ಬುಧವಾರ ಸಂಜೆ ಗಂಟೆ 4.30ಕ್ಕೆ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಬೀಡಿನಿಂದ(ನಿವಾಸ)ದಿಂದ ವಧು-ವರರು ಆಶೀರ್ವಾದವನ್ನು ಪಡೆದು ಮೆರವಣಿಗೆ ಮೂಲಕ ದೇವಳಕ್ಕೆ ಸುತ್ತು ಬಂದು, ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿಪಾಲ್ಗೊಂಡರು.

ಸಿಂಗರಿಸಿದ ಆನೆಗಳು, ಕೊಂಬು, ಕಹಳೆ, ಬ್ಯಾಂಡ್‌ ವಾದ್ಯಗಳ ಮೂಲಕ ಕ್ಷೇತ್ರದ ಪರವಾಗಿ ಸಾಂಪ್ರದಾಯಿಕವಾಗಿ ಮೆರವಣಿಗೆಯಲ್ಲಿ ವಧು-ವರರನ್ನು ಸ್ವಾಗತಿಸಲಾಯಿತು. 6.50ರ ರ ಗೋಧೂಳಿ ಮುಹೂರ್ತದಲ್ಲಿಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದೊಂದಿಗೆ ವಧು-ವರರು ಪ್ರಮಾಣ ವಚನವನ್ನು ಸ್ವೀಕರಿಸಿ, ಸತಿಪತಿಗಳಾದರು.

ಸಪ್ತಪದಿ ಯೋಜನೆ : ಚಿಕ್ಕತಿರುಪತಿಯಲ್ಲಿ ಸಾಮೂಹಿಕ ವಿವಾಹ! ಪ್ರತಿ ಜೋಡಿಗೆ ಚಿನ್ನದ ಉಡುಗೊರೆ! ₹55,000 ಪ್ರೋತ್ಸಾಹ ಧನ!
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಧರ್ಮಸ್ಥಳದಲ್ಲಿಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದ್ದು, ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತದೆ. ಇಂದು 50ನೇ ವರ್ಷವನ್ನು ಪೂರೈಸಿದ್ದು, ಇದುವರೆಗೆ ಒಟ್ಟು 12,576 ಜೋಡಿ ದಾಂಪತ್ಯ ಜೀವನವನ್ನು ಆರಂಭಿಸಿದ್ದಾರೆ.

Marriage Certificate : ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಾಹ ನೋಂದಣಿ! 'PDO'ಯಿಂದ ಪ್ರಮಾಣಪತ್ರ!
ವಧು-ವರರಿಂದ ಪ್ರಮಾಣ ವಚನ
ಶ್ರೀ ಕ್ಷೇತ್ರದಲ್ಲಿ ಬುಧವಾರ ಮಂಗಲ ಮುಹೂರ್ತದಲ್ಲಿ ವಧು-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮಗಳಲ್ಲಿ ಸಹಚರರಾಗಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವೂದೇ ದುರಭ್ಯಾಸಗಳಿಗೆ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣ ವಚನಕ್ಕೆ ಬದ್ಧರಾಗುತ್ತಿದ್ದೇವೆ ಎಂದು ನೂತನ ದಂಪತಿಗಳು ಪ್ರಮಾಣ ವಚನ ಸ್ವೀಕರಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ