ಆ್ಯಪ್ನಗರ

ದ.ಕ.ಜಿಲ್ಲೆಯಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ ಮೂವರು ಸಾವು

ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

Vijaya Karnataka Web 8 Jul 2020, 11:36 am
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಂಗಳವಾರ ರಾತ್ರಿ ಬಾಣಂತಿ ಸಹಿತ ಮೂರು‌ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಉಳ್ಳಾಲ ಮೂಲದ 62 ವರ್ಷ ವಯಸ್ಸಿನ ಮಹಿಳೆ, ಪುತ್ತೂರು ಮೂಲದ 32 ವರ್ಷದ ಬಾಣಂತಿ ಗೃಹಿಣಿ ಹಾಗೂ ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಮೂವರೂ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಇಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ 26ನೇ ಬಲಿ: 1351 ಸೋಂಕಿತರು

ಮಂಗಳವಾರ ಬಂದ ವರದಿಯಲ್ಲಿ 83 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಒಟ್ಟು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. 1351 ಮಂದಿ ಸೋಂಕಿತರಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರಲ್ಲಿ 99 ಮಂದಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಅವರನ್ನು ಮನೆ ನಿಗಾಕ್ಕೆ ಕಳುಹಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು 683 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ. ಇನ್ನು 650 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ