ಆ್ಯಪ್ನಗರ

ಅಮಿತ್ ಶಾ ಸೂಚನೆಯ ಮೇರೆಗೆ ನಡೆದಿದೆ ಮಂಗಳೂರು ಗೋಲಿಬಾರ್: ಬಿಕೆ ಹರಿಪ್ರಸಾದ್

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಇಡೀ ದೇಶದಲ್ಲಿ ಪ್ರತಿಭಟನೆ ಜೋರಾಗಿದೆ. ಬಿಜೆಪಿ ವಿರುದ್ಧವಾದ ಅಲೆ ಎಲ್ಲೆಡೆ ಹೆಚ್ಚಾಗಿದೆ. ಇದು ಮುಂದಿನ ದಿನಗಳಲ್ಲಿ ಕಮಲ ಪಕ್ಷವನ್ನು ಕೊಚ್ಚಿ ಹೋಗುವಂತೆ ಮಾಡಲಿದೆ.

Vijaya Karnataka Web 24 Dec 2019, 8:42 pm
ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹಾಗೂ ಹಿಂಸಾಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ಪ್ರಕಾರ ನಡೆದಿದೆ. ಇದರಲ್ಲಿ ಬಿಜೆಪಿ ಹಾಗೂ ಕೆಲವು ಸಂಘಟನೆಗಳು ನೇರವಾಗಿ ಭಾಗಿಯಾಗಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದರು.
Vijaya Karnataka Web ಬಿಕೆ ಹರಿಪ್ರಸಾದ್‌
ಬಿಕೆ ಹರಿಪ್ರಸಾದ್


ನಗರಕ್ಕೆ ಮಂಗಳವಾರ ಆಗಮಿಸಿದ ಅವರು ಗೋಲಿಬಾರ್‌ನಿಂದ ಮೃತಪಟ್ಟವರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಈಗಾಗಲೇ ದೇಶಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಇದು ಬಿಜೆಪಿಗೆ ತಿರುಗುಬಾಣವಾಗಲಿದೆ. ಈಗಾಗಲೇ ಬಿಜೆಪಿ, ಪ್ರಧಾನಿ ಮೋದಿ, ಅಮಿತ್‌ ಶಾ ಮೇಲೆ ಜನರಿಗೆ ನಂಬಿಕೆ ಹೊರಟು ಹೋಗಿದೆ. ಇತ್ತೀಚಿನ ಚುನಾವಣಾ ಫಲಿತಾಂಶಗಳೇ ಇದಕ್ಕೆ ಸಾಕ್ಷಿ ಎಂದರು.

'ಸಂಘ'ಟನೆಯ ಕೈಗೊಂಬೆ ಆಗಿದ್ದಾರೆ ಬಿಎಸ್‌ವೈ: ಬಿಕೆ ಹರಿಪ್ರಸಾದ್‌

ದೇಶದೆಲ್ಲೆಡೆ ವಿವಿಧ ಭಾಗಗಳಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆಯಾದರೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರವೇ ಗಲಭೆ ನಡೆಯುತ್ತಿದೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ನಡೆದ ಘಟನೆಯ ಕುರಿತಂತೆ ಸಮಗ್ರ ನ್ಯಾಯಾಂಗ ತನಿಖೆಯಾಗಬೇಕು. ಮೃತಪಟ್ಟವರ ಕುಟುಂಬಕ್ಕೆ ತಲಾ 50 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಬಿಕೆ ಹರಿಪ್ರಸಾದ್‌ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ