ಆ್ಯಪ್ನಗರ

ಆಜಾನ್ ವಿವಾದ: ಸುಪ್ರೀಂ ಕೊಟ್ ೯ ಮಾತು ಕೇಳಲ್ಲ ಅಂದ್ರೆ ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್

ಸುಪ್ರೀಂ ಕೋರ್ಟ್‌ನ ಮಾತು ಕೇಳಲ್ಲ ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ನಿಮ್ಮ ನಮಾಜ್‌ಗೆ ವಿರೋಧವಿಲ್ಲ. ಶಬ್ದಕ್ಕೆ ನಮ್ಮ ವಿರೋಧವಿದೆ. ನಿಮ್ಮಿಂದಾಗಿ ಎಲ್ಲರಿಗೂ ತೊಂದರೆಯಾಗುತ್ತಿದೆ. ಈ‌ ನಿರ್ಲಜ್ಜ ಸರ್ಕಾರಕ್ಕೂ ಈ ಆದೇಶ ಜಾರಿಗೊಳಿಸುವ ಮನಸ್ಸಿಲ್ಲ. ಕುರಾನ್‌ ನಮ್ಮ‌ ಕಾನೂನು ಎಂಬ ಸೊಕ್ಕನ್ನು ನಾವು ಒಪ್ಪಲ್ಲ. ಈಗಾಗಲೇ 25% ಬೆಳಗ್ಗಿನ ಶಬ್ಧ ನಿಂತಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಶ್ರೀರಾಮ ಸೇನೆ ಸಂಘಟನೆ ಇದನ್ನು ನಿಲ್ಲಿಸಿದೆ ಎಂದು ಮುತಾಲಿಕ್ ಗುಡುಗಿದ್ದಾರೆ

Edited byಚೇತನ್ ಓ.ಆರ್. | Vijaya Karnataka Web 20 Sep 2022, 3:00 pm
ಮಂಗಳೂರು: ಅಝಾನ್‌ನಿಂದಾಗಿ ಇಡೀ ದೇಶದಲ್ಲಿ ಕಿರಿಕಿರಿಯಾಗುತ್ತಿದೆ. ಮುಸ್ಲಿಮರು ಸುಪ್ರೀಂ ಕೋರ್ಟ್‌ಗೂ ನಮಗೂ ಸಂಬಂಧಿವಿಲ್ಲ ಎಂಬ ನೀಚ ನಿರ್ಲಜ್ಜ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
Vijaya Karnataka Web Pramod Muthalik
ಪ್ರಮೋದ್ ಮುತಾಲಿಕ್ (ಸಂಗ್ರಹ ಚಿತ್ರ)


ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ನ ಮಾತು ಕೇಳಲ್ಲ ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ನಿಮ್ಮ ನಮಾಜ್‌ಗೆ ವಿರೋಧವಿಲ್ಲ. ಶಬ್ದಕ್ಕೆ ನಮ್ಮ ವಿರೋಧವಿದೆ. ನಿಮ್ಮಿಂದಾಗಿ ಎಲ್ಲರಿಗೂ ತೊಂದರೆಯಾಗುತ್ತಿದೆ. ಈ‌ ನಿರ್ಲಜ್ಜ ಸರ್ಕಾರಕ್ಕೂ ಈ ಆದೇಶ ಜಾರಿಗೊಳಿಸುವ ಮನಸ್ಸಿಲ್ಲ. ಕುರಾನ್‌ ನಮ್ಮ‌ ಕಾನೂನು ಎಂಬ ಸೊಕ್ಕನ್ನು ನಾವು ಒಪ್ಪಲ್ಲ. ಈಗಾಗಲೇ 25% ಬೆಳಗ್ಗಿನ ಶಬ್ಧ ನಿಂತಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಶ್ರೀರಾಮ ಸೇನೆ ಸಂಘಟನೆ ಇದನ್ನು ನಿಲ್ಲಿಸಿದೆ ಎಂದರು.

ಮೇ 9ರಂದು ಬೆಳಗ್ಗೆ 5ಕ್ಕೆ 1000 ದೇವಸ್ಥಾನದಲ್ಲಿ ಓಂಕಾರ, ಸುಪ್ರಭಾತ: ಪ್ರಮೋದ್‌ ಮುತಾಲಿಕ್‌
ಹುಬ್ಬಳ್ಳಿ ಈದ್ಗಾ ಮೈದಾನ ವಿಚಾರದಲ್ಲಿ ಹಿಂದೂ ವಿರೋಧಿಗಳಿಗೆ ಕಪಾಳಮೋಕ್ಷ: ಮುತಾಲಿಕ್‌

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಪಾಲಿಕೆಯ ನಿರ್ಣಯವನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ ನೀಡಿರುವ ತೀರ್ಪಿನಿಂದ ಹಿಂದೂಗಳ ಭಾವನೆ ವಿರೋಧಿಸಿದವರಿಗೆ ಕಪಾಳ ಮೋಕ್ಷ ಆಗಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಟೀಕಿಸಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ನಮ್ಮ ಹೋರಾಟಕ್ಕೆ ಹೈಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ. ಯಾರು ಯಾವುದೇ ಕೋರ್ಟ್‌ ಗೆ ಹೋಗಲಿ. ಈಗಾಗಲೇ ಮೂರ್ತಿ ಪ್ರತಿಷ್ಠಾಪನೆಯಾಗಿದೆ. ಯಾವ ಶಕ್ತಿಯೂ ಇದನ್ನ ತಡೆಯೋಕೆ ಸಾಧ್ಯವಿಲ್ಲ ಎಂದು ಹೇಳಿದರು.

ಗಣೇಶೋತ್ಸವಕ್ಕೆ 129 ವರ್ಷಗಳ ಇತಿಹಾಸವಿದ್ದು, ಬ್ರಿಟಿಷರು ಸಹ ಇದನ್ನು ವಿರೋಧಿಸಿರಲಿಲ್ಲ. ಪ್ರಸ್ತುತ ಕಾಂಗ್ರೆಸ್‌ನವರು ಈ ವಿಷಯದಲ್ಲಿ ಮುಸ್ಲಿಮರಿಗೆ ಕುಮ್ಮಕ್ಕು ಕೊಟ್ಟು ಕೋರ್ಟ್‌ಗೆ ಕಳಿಸುತ್ತಿದ್ದಾರೆ. ಇವತ್ತು ಸಹ ಸುಪ್ರೀಂ ಕೋರ್ಟ್‌ಗೆ ಹೋಗಿ ಮೂರ್ತಿ ಪ್ರತಿಷ್ಠಾಪನೆ ತಡೆಯಲು ಯತ್ನಿಸಿದ್ದಾರೆ. ಅವರಿಗೆ ಗಣಪತಿ ಶಾಪ ತಟ್ಟದೆ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ