ಆ್ಯಪ್ನಗರ

ಉಚಿತ ಬಸ್‌ ಪಾಸ್‌

2019-20ನೇ ಶೈಕ್ಷ ಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂ.30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19ನೇ ಸಾಲಿನ ವಿದ್ಯಾರ್ಥಿ ಪಾಸಿನ ಜತೆಗೆ ಪ್ರಸಕ್ತ ಸಾಲಿನ ಬೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Vijaya Karnataka 12 Jun 2019, 5:00 am
ಮಂಗಳೂರು : 2019-20ನೇ ಶೈಕ್ಷ ಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂ.30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19ನೇ ಸಾಲಿನ ವಿದ್ಯಾರ್ಥಿ ಪಾಸಿನ ಜತೆಗೆ ಪ್ರಸಕ್ತ ಸಾಲಿನ ಬೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
Vijaya Karnataka Web bus pass
ಉಚಿತ ಬಸ್‌ ಪಾಸ್‌


ವಿದ್ಯಾರ್ಥಿಗಳು ಮಾಧ್ಯಮಿಕ ತರಗತಿಯಿಂದ ಪ್ರೌಢಶಾಲೆಗೆ ಅಥವಾ ಪ್ರೌಢಶಾಲೆಯಿಂದ ಪದವಿಪೂರ್ವ ಕಾಲೇಜಿಗೆ ಸೇರುವ ಸಂದರ್ಭದಲ್ಲಿ ಅಥವಾ ಶಾಲೆ/ಕಾಲೇಜು ಬದಲಿಸಿದ್ದ ಸಂದರ್ಭದಲ್ಲಿ ಹಾಗೂ ಮಾರ್ಗ ಬದಲಾವಣೆಯಾಗಿರುತ್ತದೆ. ಹಲವಾರು ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ವಿದ್ಯಾರ್ಥಿ ಪಾಸ್‌ ಪಡೆದಿರುವುದಿಲ್ಲ. ಆದರೆ ಈಗ ಶಾಲಾ/ಕಾಲೇಜು ಬದಲಾವಣೆಯಿಂದ ಪಾಸ್‌ ಅವಶ್ಯಕತೆಯಿರುತ್ತದೆ. ಆದ್ದರಿಂದ ಇಂತಹ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಜೂನ್‌ 30 ರವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಷರತ್ತು ಇಂತಿವೆ: ಕಳೆದ ವರ್ಷದ ಶಾಲೆ/ಕಾಲೇಜಿನಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು, ಕಳೆದ ವರ್ಷದ ಪಾಸಿನ ಜತೆಗೆ ಪ್ರಸಕ್ತ ವರ್ಷದ ಬೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ನೂತನ ಶಾಲೆ/ಕಾಲೇಜುಗಳಿಗೆ ಸೇರ್ಪಡೆಯಾಗಿದ್ದು, ಹಿಂದಿನ ವರ್ಷದ ಬಸ್‌ ಪಾಸ್‌ ಇಲ್ಲದ ಸಂದರ್ಭದಲ್ಲಿ ನೂತನ ಶಾಲೆ/ಕಾಲೇಜಿಗೆ ಸೇರ್ಪಡೆಯಾಗಿರುವ ಬೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನಿಂದ ವಿತರಣೆ ಮಾಡಿರುವ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ