ಆ್ಯಪ್ನಗರ

ಸಂಪುಟ ಪುನಾರಚನೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಚಿವ ರೈ

ರಾಜ್ಯ ಸಚಿವ ಸಂಪುಟ ಪುನರ್ ರಚನೆ ನಿಟ್ಟಿನಲ್ಲಿ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 26 Feb 2017, 3:52 pm
ಮಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆ ನಿಟ್ಟಿನಲ್ಲಿ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
Vijaya Karnataka Web cabinet reshuffle will obey high command decision ramanath rai
ಸಂಪುಟ ಪುನಾರಚನೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಚಿವ ರೈ


ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರನ್ನು ಪಕ್ಷದ ಸಂಘಟನೆಗೆ ಬಳಸಿಕೊಂಡು ಹೊಸಬರನ್ನು ಸಚಿವರನ್ನಾಗಿ ನೇಮಕ ಮಾಡುವ ಸುದ್ದಿಇದೆ. ಆದರೆ ಇದು ಸುಳ್ಳು. ಸುಳ್ಳು ಸುದ್ದಿಗಳು ಬಹುಬೇಗನೆ ಹರಡುತ್ತದೆ. ಸತ್ಯ ಸಂಗತಿಗಳು ಮಾತ್ರ ನಿಧಾನವಾಗಿ ಹರಡುತ್ತದೆ. ನನಿಗೆ ಇದುವರೆಗೆ ಪಕ್ಷದಿಂದ ಸಚಿವ ಸ್ಥಾನವನ್ನು ಕಿತ್ತುಕೊಳ್ಳುವ ಬಗ್ಗೆ ಮಾಹಿತಿ ನೀಡಿಲ್ಲ. ಅಂತಹಾ ಯಾವುದೇ ನಿರ್ಧಾರ ಕೂಡಾ ಪಕ್ಷದಲ್ಲಿ ಆಗಿಲ್ಲ. ಒಂದು ವೇಳೆ ನನ್ನನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿದರೆ ಸಂತೋಷ ಎಂದು ಅವರು ತಿಳಿಸಿದ್ದಾರೆ.

ಖಾದರ್ ವಿವಾದಾತ್ಮಕ ಹೇಳಿಕೆಗೆ ಸಮರ್ಥನೆ: ಸಂವಿಧಾನವನ್ನು ವಿರೋಧಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಶನಿವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ಸಚಿವ ರಮಾನಾಥ ರೈ ಸಮರ್ಥಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಮಾನಾಥ ರೈ, ಎಲ್ಲರಿಗೂ ವಾಕ್ ಸ್ವಾತಂತ್ರ್ಯದ ಹಕ್ಕು ಇದೆ. ಸಂವಿಧಾನ ವಿರೋಸುವವರನ್ನು ಉದ್ದೇಶಿಸಿ ಖಾದರ್ ಈ ರೀತಿ ಹೇಳಿದ್ದಾರೆ. ಅವರ ಮನಸ್ಸಿಗೆ ಅದು ಸರಿ ಕಂಡಿರಬಹುದು. ಅವರ ಮನಸ್ಸಿನಲ್ಲಿ ಇದ್ದುದನ್ನು ಅವರು ಹೇಳಿದ್ದಾರೆ ಅಷ್ಟೇ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ