ಆ್ಯಪ್ನಗರ

ಕರಾವಳಿಯಲ್ಲಿ ಪೌರತ್ವ ಕಿಚ್ಚು: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್‌ಆರ್‌ಸಿ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಅಡ್ಯಾರ್‌ ಗಾರ್ಡನ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದಾರೆ.

Vijaya Karnataka Web 15 Jan 2020, 4:06 pm
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (2019) ಹಾಗೂ ಎನ್‌ಆರ್‌ಸಿ, ಎನ್‌ಪಿಆರ್‌ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನಗರದ ಹೊರವಲಯದ ಅಡ್ಯಾರ್‌ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಚಿಂತಕ ಹರ್ಷ ಮಂದರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್‌ ಪಕ್ಷದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
Vijaya Karnataka Web citizenship amendment act protest at mangaluru
ಕರಾವಳಿಯಲ್ಲಿ ಪೌರತ್ವ ಕಿಚ್ಚು: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ


ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಡಿಸೆಂಬರ್ 16 ರಂದು ಯುವಕರ ಗುಂಪೊಂದು ನಡೆಸಿದ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದು ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಯುವಕರು ಮೃತಪಟ್ಟಿದ್ದರು.

ಈ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್‌ ಈ ಘಟನೆಯನ್ನು ಖಂಡಿಸಿ ಬಿಎಸ್‌ವೈ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಗೋಲಿಬಾರ್‌ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಪ್ರತಿಭಟನೆ ನಡೆಸಲು ಅವಕಾಶ ನೀಡಿರಲಿಲ್ಲ.

ಇದೀಗ 35 ಮುಸ್ಲಿಂ ಸಂಘಟನೆಗಳ ಬೆಂಬಲದೊಂದಿಗೆ ಮಂಗಳೂರಿನ ಹೊರವಲಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲಾಧ್ಯಂತ ಸುಮಾರು 5000 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹರ್ಷ ಮಂದರ್ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಹೋರಾಟ ಜಾತ್ಯತೀತವಾಗಿರಬೇಕು ಅಲ್ಲದೆ ಮಹಾತ್ಮ ಗಾಂಧಿಯ ಅಹಿಂಸಾ ತತ್ವದಲ್ಲಿ ನಡೆಯಬೇಕು ಎಂದರು. ಪ್ರತಿಭಟನಾಕಾರರು ಒಂದು ಕೈಯಲ್ಲಿ ಸಂವಿಧಾನವನ್ನು ಹಿಡಿದುಕೊಂಡು ಮತ್ತೊಂದು ಕೈಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ