ಆ್ಯಪ್ನಗರ

ಮಂಗಳೂರು ದಸರಾ ಸಿಎಂ ಉದ್ಘಾಟನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅ.10ರಿಂದ 19ರ ವರೆಗೆ ದಸರಾ ಮಹೋತ್ಸವ ನಡೆಯಲಿದ್ದು, ಪ್ರತಿದಿನವೂ ಕ್ಷೇತ್ರದಲ್ಲಿ ಮಧ್ಯಾಹ್ನ ಅನ್ನದಾನ ನಡೆಯಲಿದೆ.

Vijaya Karnataka 22 Sep 2018, 10:32 pm
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
Vijaya Karnataka Web Kudroli dasara


ಈ ಬಾರಿ ಮಂಗಳೂರು ದಸರಾ ಮಹೋತ್ಸವ ಅ.10ರಿಂದ 19ರವರೆಗೆ ನಡೆಯಲಿದ್ದು, ದಸರಾ ಮಹೋತ್ಸವ ಉದ್ಘಾಟನಾ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅ. 10ರಂದು ದೇವಾಲಯದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಅ.19ರಂದು ವೈಭವದ ಶೋಭಾ ಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ನಾನಾ ಗಣ್ಯರಿಗೆ ಆಹ್ವಾನ: ಮಂಗಳೂರು ದಸರಾ ಮಹೋತ್ಸವದ 9 ದಿನ ನಾನಾ ಕ್ಷೇತ್ರದ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಪ್ರತಿದಿನವೂ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ, ದೇಶದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ ಅನ್ನದಾನ ನಡೆಯಲಿದೆ ಎಂದು ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ