ಆ್ಯಪ್ನಗರ

ಶ್ರೀರಾಮ ಮಂದಿರ ನಿರ್ಮಾಣ ಧರ್ಮದ ಪುನರುತ್ಥಾನ: ಒಡಿಯೂರು ಶ್ರೀ

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್‌ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ ಎಂದು ಒಡಿಯೂರು ಶ್ರೀ ತಿಳಿಸಿದ್ದಾರೆ.

Vijaya Karnataka Web 3 Aug 2020, 7:36 pm
ಒಡಿಯೂರು: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್‌ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ ಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ತಿಳಿಸಿದ್ದಾರೆ.
Vijaya Karnataka Web odiyoor shree


'ರಾಮ' ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ವಗಳ ಚಿಂತನೆ ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ 'ರಾಮ' ಎನ್ನಲು ಅನುಕೂಲವಾದುದು. 'ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ...' ಎಂದು ದಾಸರು ಕೊಂಡಾಡಿದ್ದಾರೆ.

ಸಾಕ್ಷಾತ್‌ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ಈ ಸಂಬಂಧ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ ಎಂದರು.

ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ..! ಡಿಸೆಂಬರ್‌ 6, 1992ರಂದು ಅಯೋಧ್ಯೆಯಲ್ಲಿ ನಡೆದಿದ್ದೇನು..?

ಪ್ರಧಾನಮಂತ್ರಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮ ಪ್ರೇಮವೆಂದರೆ ಅದು ರಾಷ್ಟ್ರ ಪ್ರೇಮವೇ ಸರಿ.

ಬೆಳಗಾವಿಯಲ್ಲಿ ರಾಸುಗಳ ತಳಿ ಉನ್ನತೀಕರಣ ಯೋಜನೆಗೆ ಚಾಲನೆ!

ರಾಮತತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಆಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮ ಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ