ಆ್ಯಪ್ನಗರ

ದ.ಕ. ಜಿಲ್ಲೆಯಲ್ಲಿ 34 ಮಂದಿಗೆ ಕೊರೊನಾ ಪಾಸಿಟಿವ್‌: ಸೋಂಕಿತರ ಸಂಖ್ಯೆ 1276ಕ್ಕೆ ಏರಿಕೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಮವಾರ ಜಿಲ್ಲೆಯಲ್ಲಿ 34 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 1276ಕ್ಕೆ ಏರಿಕೆಯಾಗಿದೆ.

Vijaya Karnataka Web 7 Jul 2020, 7:01 am
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 34 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಜಿಲ್ಲೆಯಲ್ಲಿಒಟ್ಟು ಸೋಂಕಿತರ ಸಂಖ್ಯೆ 1276ಕ್ಕೇರಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಹೊಸ ಪ್ರಕರಣಗಳಲ್ಲಿ 17 ಮಂದಿಗೆ ಪ್ರಾಥಮಿಕ ಸಂಪರ್ಕ, 9 ಮಂದಿಗೆ ಅಸೌಖ್ಯ, ಒಬ್ಬರಿಗೆ ಉಸಿರಾಟದ ಸಮಸ್ಯೆ, ಐವರು ಸರ್ಜರಿಗೆ ದಾಖಲಾದವರು ಹಾಗೂ ಒಬ್ಬರಿಗೆ ರ್ಯಾಂಡಮ್ ‌ ಟೆಸ್ಟ್‌ ಸಂದರ್ಭ ಪಾಸಿಟಿವ್‌ ವರದಿ ಬಂದಿದೆ.

30 ಮಂದಿ ಬಿಡುಗಡೆ
ಕೊರೊನಾ ಸೋಂಕಿಗೆ ಒಳಗಾಗಿ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರಲ್ಲಿ 30 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಅವರನ್ನು ಮನೆ ನಿಗಾಕ್ಕೆ ಕಳುಹಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 584 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದುವರೆಗೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ಮಂದಿ ಚೇತರಿಸಿಕೊಂಡಿದ್ದು, ಅವರನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ