ಆ್ಯಪ್ನಗರ

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ವೆನ್ಲಾಕ್ ಆಸ್ಪತ್ರೆಗೆ ಭೇಟಿ, ಪರಿಶೀಲನೆ

ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಯ ಅವ್ಯವಸ್ಥೆ ಬಗ್ಗೆ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳು ವೈರಲ್ ಆಗಿದ್ದು. ಈ ಕಾರಣದಿಂದ ತುರ್ತು ಪರಿಶೀಲನೆಗೆ ಸಂಸದ ನಳಿನ್ ಕುಮಾರ್ ಆಸ್ಪತ್ರೆಗೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Vijaya Karnataka Web 24 Mar 2020, 12:16 pm
ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಬಿತ್ತರವಾಗುತ್ತಿದ್ದಂತೆ, ಸಂಸದ ನಳಿನ್ ಕುಮಾರ್ ಮಂಗಳವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web naleen kumar kateel


ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಯ ಅವ್ಯವಸ್ಥೆ ಬಗ್ಗೆ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು‌. ಈ ಕಾರಣದಿಂದ ತುರ್ತು ಪರಿಶೀಲನೆಗೆ ಸಂಸದ ನಳಿನ್ ಕುಮಾರ್ ಆಸ್ಪತ್ರೆಗೆ ಆಗಮಿಸಿದ್ದಾರೆಂದು ತಿಳಿದು ಬಂದಿದೆ. ಮಂಗಳೂರಿಗೆ ಆಗಮಿಸಿದ ಬಳಿಕ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್, ಆಸ್ಪತ್ರೆಯ ಅಧೀಕ್ಷಕಿ ರಾಜೇಶ್ವರಿ ಸಹಿತ ಬೇರೆ ಬೇರೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು, ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆಯಿದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಪರಿಶೀಲನೆ ಬಳಿಕ ಸಂಸದ ನಳಿನ್ ಕುಮಾರ್ ಮಾತನಾಡಿ, ಜನರು ಊಹಾಪೋಹಗಳನ್ನು ನಂಬಬಾರದು. ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ