ಆ್ಯಪ್ನಗರ

ಮಲೈಕಾ ಸೊಸೈಟಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ

ಮುಂಬಯಿ, ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಹೊಂದಿದೆ. ಹಿರಿಯ ನಾಗರಿಕರಿಗೆ ವಿಶೇಷ ಬಡ್ಡಿ ದರ ನೀಡುವ ಮೂಲಕ ಸಾವಿರಾರು ಮಂದಿಯನ್ನು ತನ್ನೆಡೆಗೆ ಸೆಳೆದು ಕೋಟ್ಯಂತರ ರೂ. ಹೂಡಿಕೆ ಮಾಡಲಾಗಿತ್ತು.

Vijaya Karnataka Web 19 Nov 2020, 11:23 pm
ಮಂಗಳೂರು: ಮಲೈಕಾ ಸೊಸೈಟಿ ಹೆಸರಲ್ಲಿ ಗ್ರಾಹಕರಿಂದ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ವಂಚನೆ ಮಾಡಿದ ಬಗ್ಗೆ ಮಾದಕದ್ರವ್ಯ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Vijaya Karnataka Web ವಂಚನೆ
ವಂಚನೆ


ಮುಂಬಯಿ, ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಹೊಂದಿದೆ. ಹಿರಿಯ ನಾಗರಿಕರಿಗೆ ವಿಶೇಷ ಬಡ್ಡಿ ದರ ನೀಡುವ ಮೂಲಕ ಸಾವಿರಾರು ಮಂದಿಯನ್ನು ತನ್ನೆಡೆಗೆ ಸೆಳೆದು ಕೋಟ್ಯಂತರ ರೂ. ಹೂಡಿಕೆ ಮಾಡಲಾಗಿತ್ತು.

ಅವಧಿ ಮುಗಿದಾಗ ಹಣ ಹಿಂತಿರುಗಿಸುವಂತೆ ಕೇಳಿದಾಗ ಯಾವದೇ ಸ್ಪಂದನೆ ಸಿಕ್ಕಿಲ್ಲ. ಈ ಬಗ್ಗೆ ವಿಚಾರಣೆ ನಡೆಸಿದಾಗ ಆ ಹಣವನ್ನು ಸೊಸೈಟಿ ಮಾಲೀಕರು ತಮ್ಮ ಖಾತೆಗೆ ಜಮೆ ಮಾಡಿರುವುದು ಗಮನಕ್ಕೆ ಬಂದು 100ಕ್ಕೂ ಅಧಿಕ ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹಲವರಿಗೆ ವಂಚನೆ ಆಗಿದ್ದು, ಅವರ ಹೆಸರನ್ನು ನಮೂದಿಸಿ ಒಬ್ಬರ ಹೆಸರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜಿಲ್ಲೆಯ ಮಂಗಳೂರು, ತೊಕ್ಕೊಟ್ಟು, ಬಂಟ್ವಾಳ, ಪುತ್ತೂರು, ಸುಳ್ಯ, ವಿಟ್ಲ, ಮೂಡುಬಿದಿರೆ ಮೊದಲಾದ ಕಡೆ ಮಲೈಕಾ ಎಲೆಕ್ಟ್ರಾನಿಕ್ಸ್ ಮಳಿಗೆಗಳಿವೆ.

ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ಸೊಸೈಟಿಯ ಪ್ರಧಾನ ಕಚೇರಿಯನ್ನು ಹೊಂದಿದೆ. ಜಿಲ್ಲೆಯಲ್ಲಿ 800ಕ್ಕೂ ಅಧಿಕ ಗ್ರಾಹಕರನ್ನು ಹೊಂದಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಒಟ್ಟು ಎಷ್ಟು ಮಂದಿಗೆ ಎಷ್ಟು ಮೊತ್ತ ವಂಚನೆಯಾಗಿದೆ ಎಂಬುದು ಪತ್ತೆ ಮಾಡಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ