ಆ್ಯಪ್ನಗರ

ಗಾಂಜಾ ಮಾರಾಟ: ಮೂವರ ಬಂಧನ

ನಿಷೇಧಿತ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಬಳಿ ಮೂವರನ್ನು ಬಂಧಿಸಿದ್ದಾರೆ.

Vijaya Karnataka 27 Jul 2019, 5:00 am
ಮಂಗಳೂರು: ನಿಷೇಧಿತ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಬಳಿ ಮೂವರನ್ನು ಬಂಧಿಸಿದ್ದಾರೆ.
Vijaya Karnataka Web 26m-ganja mohamad


ವಾಮಂಜೂರು ಆಶ್ರಯ ಕಾಲೊನಿ ನಿವಾಸಿ ಮಹಮ್ಮದ್‌ ಮುಸ್ತಫಾ (21), ಉಳಾಯಿಬೆಟ್ಟು ಆಚಾರಿಬೆಟ್ಟು ನಿವಾಸಿ ಹಸನ್‌ ಅಫ್ರಾನ್‌ ಯಾನೆ ಅಫ್ರಾನ್‌ ಯಾನೆ ಅಪ್ಪು (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಜಲ್‌ ಯಾನೆ ಫೈಜಲ್‌ ಯಾನೆ ಪಜ್ಜು (36) ಬಂಧಿತ ಆರೋಪಿಗಳು.

ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 4 ಕೆ.ಜಿ. ತೂಕದ ಗಾಂಜಾ, ಬೂದು ಬಣ್ಣದ ಹೋಂಡಾ ಆಕ್ಟಿವಾ ಸ್ಕೂಟರ್‌ ಸೇರಿದಂತೆ ಒಟ್ಟು 1ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಪೈಕಿ ಮುಸ್ತಫಾ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣ ಸೇರಿದಂತೆ ಮೂರು ಪ್ರಕರಣ, ಆರೋಪಿ ಫೈಜಲ್‌ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕಳ್ಳತನ ಮತ್ತು ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು ಅವರ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೇಗಣೇಶ್‌ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಟಿ. ಕೋದಂಡರಾಮ್‌ರವರ ನೇತೃತ್ವದ ಮಂಗಳೂರು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿ ಮತ್ತು ಉಳ್ಳಾಲ ಪೊಲೀಸ್‌ ನಿರೀಕ್ಷಕ ಗೋಪಿಕೃಷ್ಣರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

26ಎಂ-ಗಾಂಜಾ ಫೈಝಲ್‌, 26ಎಂ-ಗಾಂಜಾ ಹಸನ್‌, 26ಎಂ-ಮಹಮ್ಮದ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ