ಆ್ಯಪ್ನಗರ

ಮಂಗಳೂರು: ಡ್ರಗ್ಸ್ ಆರೋಪಿ ಜತೆ ನಂಟು, ಯುವತಿ ಪೊಲೀಸ್ ವಶಕ್ಕೆ

ಕಿಶೋರ್ ಜತೆ ಹಲವು ಯುವಕರು, ಯುವತಿಯರು, ಮೆಡಿಕಲ್ ವಿದ್ಯಾರ್ಥಿಗಳು ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಆ ನಿಟ್ಟಿನಲ್ಲಿ ಮತ್ತಷ್ಟು ಮಂದಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vijaya Karnataka Web 21 Sep 2020, 9:56 pm
ಮಂಗಳೂರು: ಮಾದಕ ವಸ್ತು ಸೇವನೆ ಹಾಗೂ ಸಾಗಾಟ ಆರೋಪದ ಮೇಲೆ ಬಂಧಿತನಾಗಿರುವ ಕೊರಿಯೋಗ್ರಾಫರ್ ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಜತೆ ಸಂಪರ್ಕದಲ್ಲಿದ್ದ ಯುವತಿ ತಪಾಸಣೆ ವೇಳೆ ಡ್ರಗ್ಸ್ ಸೇವನೆ ದೃಢಪಟ್ಟಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Vijaya Karnataka Web ಪೊಲೀಸ್‌
ಪೊಲೀಸ್‌


ಆರೋಪಿ ಕಿಶೋರ್ ನೀಡಿದ ಮಾಹಿತಿ ಹಾಗೂ ದಾಖಲೆ ಮೇರೆಗೆ ಈ ಪ್ರಕರಣದಲ್ಲಿ ನಾರ್ಕೊಟಿಕ್ ಪೊಲೀಸರುಇಬ್ಬರು ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇವರಲ್ಲಿ ಒಬ್ವ ಯುವತಿ ಡ್ರಗ್ ಸೇವನೆ ದೃಢಪಟ್ಟಿದೆ.

ವಿದ್ಯಾರ್ಥಿಗಳು ಭಾಗಿ

ಕಿಶೋರ್ ಜತೆ ಹಲವು ಯುವಕರು, ಯುವತಿಯರು, ಮೆಡಿಕಲ್ ವಿದ್ಯಾರ್ಥಿಗಳು ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಆ ನಿಟ್ಟಿನಲ್ಲಿ ಮತ್ತಷ್ಟು ಮಂದಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದು ಮಾತ್ರವಲ್ಲದೆ ಈತನ ಮುಂಬಯಿ, ಬೆಂಗಳೂರು ಸಂಪರ್ಕ ಬಗ್ಗೆಯೂ ತನಿಖೆ ಮುಂದುವರಿದಿದೆ.

ಕೊರೊನಾ ಟೆಸ್ಟ್

ಆರೋಪಿಗಳಾದ ಕಿಶೋರ್ ಹಾಗೂ ಅಕೀಲ್ ನೌಶಾಲ್ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಮಂಗಳವಾರ ವರದಿ ಬರಲಿದೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ