ಆ್ಯಪ್ನಗರ

ಏರ್‌ಪೋರ್ಟ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ

ದುಬೈನಿಂದ ವಿಮಾನದಲ್ಲಿಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿ 5.58 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Vijaya Karnataka 15 Sep 2021, 1:04 am
ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 16.13ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ ಮಾಡಿ ಕಾಸರಗೋಡಿನ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಕಾಸರಗೋಡಿನ ಹುಸೈನ್‌ ರಾಝಿ ಮೊಯ್ದೀನ್‌ ಅಬೂಬಕ್ಕರ್‌ (26) ಎಂಬಾತ ಅಕ್ರಮ ಚಿನ್ನವನ್ನು ಟೋಯ್‌ ಸೆಟ್‌ನ ಒಳಗಿಟ್ಟು ಪ್ಯಾಕ್‌ ಮಾಡಿ ಸಾಗಾಟ ಮಾಡಲು ಯತ್ನಿಸಿದ್ದ. ದುಬೈಯಿಂದ ಆಗಮಿಸಿದ ಏರ್‌ ಇಂಡಿಯಾ ವಿಮಾನದಲ್ಲಿಪ್ರಯಾಣಿಸಿದ್ದ ಈತನನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ ಶುದ್ಧ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಇದರಲ್ಲಿಒಟ್ಟು 219ಗ್ರಾಂ ಚಿನ್ನವಿದ್ದು, ಇದರ ಮೌಲ್ಯ 10,55,580 ರೂ.ಗಳಾಗಿವೆ.
Vijaya Karnataka Web ಪೊಲೀಸ್‌
ಪೊಲೀಸ್‌


5.58 ಲಕ್ಷ ರೂ. ಮೌಲ್ಯದ ಚಿನ್ನ ವಶ

ಇನ್ನೊಂದು ಪ್ರಕರಣದಲ್ಲಿ ದುಬೈನಿಂದ ವಿಮಾನದಲ್ಲಿಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿ 5.58 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿ ಕಾಸರಗೋಡು ಮೂಲದ ಸಲೀಂ ಅಬ್ದುಲ್ಲಎಂಬಾತ ಭಾನುವಾರ ದುಬಾಯಿನಿಂದ ಮಂಗಳೂರಿಗೆ ವಿಮಾನದಲ್ಲಿಬಂದಿಳಿದಿದ್ದ. ಆತ ತಂದಿದ್ದ ಎಗ್‌ ಕುಕ್ಕರ್‌ ಮಷಿನ್‌ನ ಹೀಟರ್‌ನಲ್ಲಿಚಿನ್ನವನ್ನು ಅಡಗಿಸಿರುವುದು ತಪಾಸಣೆ ವೇಳೆ ಗೊತ್ತಾಗಿದೆ. ಈತನಿಂದ 5,58,720 ರೂ. ಮೌಲ್ಯದ 116.400 ಗ್ರಾಂ ಚಿನ್ನ ವಶಪಡಿಸಲಾಗಿದೆ. ಆರೋಪಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ