ಆ್ಯಪ್ನಗರ

ಮಂಗಳೂರಿನಲ್ಲಿ ಭರ್ಜರಿ ಮಳೆ, ನದಿ ಅಕ್ಕಪಕ್ಕ ನೆರೆ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಆರಂಭಗೊಂಡಿದ್ದ ಜಿಟಿ ಜಿಟಿ ಮಳೆ ಮಧ್ಯಾಹ್ನ ವೇಳೆಗೆ ತುಸು ಕಡಿಮೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಮಳೆ ಸುರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿತ್ತು. ನಗರದ ಬಿಜೈ ಬಳಿ ರಸ್ತೆಗೆ ಮರ ಬಿದ್ದು, ಕೆಲ ಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರ ತೆರವು ಮಾಡಿದರು.

Vijaya Karnataka 10 Aug 2019, 5:00 am
ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಆರಂಭಗೊಂಡಿದ್ದ ಜಿಟಿ ಜಿಟಿ ಮಳೆ ಮಧ್ಯಾಹ್ನ ವೇಳೆಗೆ ತುಸು ಕಡಿಮೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಮಳೆ ಸುರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿತ್ತು. ನಗರದ ಬಿಜೈ ಬಳಿ ರಸ್ತೆಗೆ ಮರ ಬಿದ್ದು, ಕೆಲ ಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರ ತೆರವು ಮಾಡಿದರು.
Vijaya Karnataka Web heavy rain in mangalore
ಮಂಗಳೂರಿನಲ್ಲಿ ಭರ್ಜರಿ ಮಳೆ, ನದಿ ಅಕ್ಕಪಕ್ಕ ನೆರೆ

ಶುಕ್ರವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಪಡೀಲು ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ನಗರದ ಕಂಬ್ಳ ರಸ್ತೆ, ಕೊಟ್ಟಾರ, ಕುದ್ರೋಳಿ, ಕೊಟ್ಟಾರಚೌಕಿ, ಮಣ್ಣಗುಡ್ಡೆ, ಕುದ್ರೋಳಿ, ಡೊಂಗರಕೇರಿ, ಅಳಕೆ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಬೆಳಗ್ಗೆ ಕೆಲಸಕ್ಕೆಂದು ತೆರಳುವ ಸಮಯದಲ್ಲಿ ಭಾರೀ ಮಳೆಯಾಗಿದ್ದು, ಇದರಿಂದಾಗಿ ನಗರದ ಜ್ಯೋತಿ ವೃತ್ತ, ಬಂಟ್ಸ್‌ ಹಾಸ್ಟೆಲ್‌, ಸ್ಟೇಟ್‌ಬ್ಯಾಂಕ್‌, ಪಂಪ್‌ವೆಲ್‌, ನಂತೂರು, ಕಂಕನಾಡಿ, ಪಿ.ವಿ.ಎಸ್‌. ವೃತ್ತ, ಕೊಟ್ಟಾರ ಚೌಕಿ, ಹಂಪನಕಟ್ಟೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮುಂಗಾರು ಮುಂಜಾಗ್ರತೆ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ 24 ಗಂಟೆಗಳ ಕಂಟ್ರೋಲ್‌ ರೂಂ. ತೆರೆಯಲಾಗಿದೆ. ಹಗಲು ಮತ್ತು ರಾತ್ರಿಯ ಪ್ರತ್ಯೇಕ ತಂಡವನ್ನು ನೇಮಿಸಲಾಗಿದೆ. ಸಾರ್ವಜನಿಕರು 0824-220319/220306 ದೂರವಾಣಿ ಸಂಖ್ಯೆ ಕರೆ ಮಾಡಿ ದೂರುಗಳನ್ನು ನೀಡಬಹುದು. ಜಿಲ್ಲಾಡಳಿತ ಕೂಡ ಕಂಟ್ರೋಲ್‌ ರೂಂ. ತೆರೆದಿದ್ದು, 1077 ಟೋಲ್‌ ಪ್ರೀ ನಂಬರ್‌ಗೆ ಕರೆ ಮಾಡಬಹುದಾಗಿದೆ. ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಕರಾವಳಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ