ಆ್ಯಪ್ನಗರ

ದಕ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಪ್ರದಾನ

ಸ್ವಚ್ಛ ಭಾರತ ಅಭಿಯಾನದಡಿ ಆರೋಗ್ಯ ಇಲಾಖೆಯ 29 ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಪ್ರದಾನ ಸಮಾರಂಭವು ದಕ ಜಿಲ್ಲಾಧಿಕಾರಿ ಕಚೇರಿಯಲ್ಲಿಗುರುವಾರ ನಡೆಯಿತು...

Vijaya Karnataka 22 Nov 2019, 4:49 pm
ಮಂಗಳೂರು: ಸ್ವಚ್ಛ ಭಾರತ ಅಭಿಯಾನದಡಿ ಆರೋಗ್ಯ ಇಲಾಖೆಯ 29 ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಪ್ರದಾನ ಸಮಾರಂಭವು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿಗುರುವಾರ ನಡೆಯಿತು.
Vijaya Karnataka Web kayakalpa award presented to dk hospitals
ದಕ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಪ್ರದಾನ

ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಪ್ರಶಸ್ತಿ ಪ್ರದಾನ ನೆರವೇರಿಸಿ, ಮುಂದಿನ ವರ್ಷಗಳಲ್ಲಿಇನ್ನೂ ಹೆಚ್ಚಿನ ಪ್ರಶಸ್ತಿ ಜಿಲ್ಲೆಯ ಆಸ್ಪತ್ರೆಗಳಿಗೆ ಸಿಗಬೇಕು. ಆ ನಿಟ್ಟಿನಲ್ಲಿಈಗಿಂದಲೇ ಕಾರ್ಯತತ್ಪರರಾಗಬೇಕು ಎಂದರು.
ಜಿಲ್ಲಾಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್‌, ವೆನ್ಲಾಕ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್‌.ಆರ್‌., ಲೇಡಿಗೋಶನ್‌ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕಿ ಡಾ.ಸವಿತಾ, ಜಿಲ್ಲಾಕುಟುಂಬ ಕಲ್ಯಾಣಾ ಧಿಕಾರಿ ಡಾ.ಸಿಕಂದರ್‌ ಪಾಷಾ, ವೆನ್ಲಾಕ್‌ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಶರತ್‌ ಕುಮಾರ್‌ ಉಪಸ್ಥಿತರಿದ್ದರು. ಜಿಲ್ಲಾವೆನ್ಲಾಕ್‌ ಆಸ್ಪತ್ರೆ ಮತ್ತು ಜಿಲ್ಲಾಸರಕಾರಿ ಲೇಡಿಗೋಶನ್‌ ಆಸ್ಪತ್ರೆಗಳಿಗೆ ತಲಾ 3 ಲಕ್ಷ ರೂ. ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕು ಆಸ್ಪತ್ರೆ, ವಿಟ್ಲ, ಮೂಡುಬಿದಿರೆ, ಮೂಲ್ಕಿ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರಗಳಿಗೆ ತಲಾ ಒಂದು ಲಕ್ಷ ರೂ. ಬಹುಮಾನ ಸಹಿತ ಪ್ರಶಸ್ತಿ ನೀಡಲಾಯಿತು. 18 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಟ್ಟು 8.50 ಲಕ್ಷ ರೂ. ಬಹುಮಾನ, ಉತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಶಸ್ತಿ ಪಡೆದ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉತ್ತಮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಶಸ್ತಿ ಪಡೆದ ಪುತ್ತೂರು ಆರೋಗ್ಯ ಕೇಂದ್ರಕ್ಕೆ ತಲಾ ಎರಡು ಲಕ್ಷ ರೂ. ಬಹುಮಾನ ಸಹಿತ ಪ್ರಶಸ್ತಿ ಪತ್ರ ವಿತರಿಸಲಾಯಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ