ಆ್ಯಪ್ನಗರ

ಮಂಗಳೂರು ವಿಮಾನ ನಿಲ್ದಾಣಕ್ಕೆ 'ಕೋಟಿ-ಚೆನ್ನಯ' ಹೆಸರಿಡುವಂತೆ ಕೇಂದ್ರಕ್ಕೆ ಶಿಫಾರಸು - ಮಾಧುಸ್ವಾಮಿ ಭರವಸೆ

ಶೂನ್ಯವೇಳೆಯಲ್ಲಿ ಶಾಸಕ ಉಮಾನಾಥ್‌‌ ಕೋಟ್ಯಾನ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿದರು. ಜನರ ಭಾವನೆಗಳಿಗೆ ಬೆಲೆ ಕೊಟ್ಟು ಸರಕಾರ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Vijaya Karnataka 8 Dec 2020, 11:09 pm
ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವೀರಪುರುಷ ಕೋಟಿ-ಚೆನ್ನಯ’ ಹೆಸರಿಡುವಂತೆ ಬಿಜೆಪಿ ಶಾಸಕ ಉಮಾಕಾಂತ ಕೋಟ್ಯಾನ್‌ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸರಕಾರ ಭರವಸೆ ನೀಡಿದೆ.
Vijaya Karnataka Web JC Madhu swamy


ಶೂನ್ಯವೇಳೆಯಲ್ಲಿ ಉಮಾನಾಥ್‌‌ ಕೋಟ್ಯಾನ್‌ ಈ ವಿಚಾರ ಪ್ರಸ್ತಾಪಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿ ಈ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಹೋರಾಟ, ಸಮಾವೇಶಗಳು ನಡೆಯುತ್ತಿವೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ಸರಕಾರ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಶಾಸಕರಾದ ಹರೀಶ್‌ ಪೂಂಜಾ, ವೇದವ್ಯಾಸ ಕಾಮತ್‌ ಮೊದಲಾದವರು ಧ್ವನಿಗೂಡಿಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ, ಮುಖಂಡರ ಜತೆ ಸಂಸದ ಕಟೀಲ್ ಚರ್ಚೆ
ಈ ಪ್ರಸ್ತಾಪಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆಸಿ ಮಾಧುಸ್ವಾಮಿ, ಕೋಟಿ-ಚೆನ್ನಯ ಹೆಸರು ಇಡುವುದಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ತಕ್ಷಣ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ