ಆ್ಯಪ್ನಗರ

ಮಂಗಳೂರು ನಗರಕ್ಕೆ ದಿನ ಬಿಟ್ಟು ದಿನ ನೀರು

ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್‌ ಡ್ಯಾಂನ ಟ್ರಾನ್ಸ್‌ಫಾರ್ಮರ್‌ಗೆ ಸಿಡಿಲಿನಿಂದ ಹಾನಿಯಾಗಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಆಗಲಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Vijaya Karnataka 14 Jun 2019, 4:06 pm
ಮಂಗಳೂರು: ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್‌ ಡ್ಯಾಂನ ಟ್ರಾನ್ಸ್‌ಫಾರ್ಮರ್‌ಗೆ ಸಿಡಿಲಿನಿಂದ ಹಾನಿಯಾಗಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಆಗಲಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.
Vijaya Karnataka Web mangalore city water rationing time changed
ಮಂಗಳೂರು ನಗರಕ್ಕೆ ದಿನ ಬಿಟ್ಟು ದಿನ ನೀರು


ಗುರುವಾರ ಬೆಳಗ್ಗೆ ನಗರದಲ್ಲಿ ಸುರಿದ ಗುಡುಗು ಸಹಿತ ಮಳೆಗೆ ಮಹಾನಗರಪಾಲಿಕೆಯ ಪಡೀಲ್‌ನಲ್ಲಿರುವ ನೆಲಮಟ್ಟದ ಮುಖ್ಯ ಜನಸಂಗ್ರಹಾರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಉತ್ತುಂಗ ಸ್ಥಾವರ ನಂಬರ್‌-2ಕ್ಕೆ ವಿದ್ಯುತ್‌ ಪೂರೈಕೆ ಮಾಡುವ ಟ್ರಾನ್ಸಫಾರ್ಮರ್‌ಗೆ ಸಿಡಿಲಿನಿಂದ ಹಾನಿಯಾಗಿದೆ. ತುರ್ತಾಗಿ ದುರಸ್ತಿ ಮಾಡುವ ಕಾರ್ಯಪ್ರಗತಿಯಲ್ಲಿದ್ದು, ದುರಸ್ತಿ ಕಾರ್ಯ ಮುಗಿಯುವವರೆಗೆ ನಗರವ್ಯಾಪ್ತಿ ಮತ್ತು ಸುರತ್ಕಲ್‌ ಪ್ರದೇಶಗಳನ್ನು 2 ವಿಭಾಗಗಳಾಗಿ ವಿಂಗಡಿಸಿ ಪ್ರತಿ ವಿಭಾಗಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

ನೀರು ಹೆಚ್ಚಳ: ಜಿಲ್ಲೆಯಲ್ಲಿ ಗುರುವಾರ ಬಿರುಸಿನ ಮಳೆಯಾಗಿದ್ದು ಇದರ ಪರಿಣಾಮ ತುಂಬೆ ಡ್ಯಾಂನ ನೀರಿನ ಮಟ್ಟ 2.55ಮೀಟರ್‌ಗೆ ಏರಿಕೆಯಾಗಿದೆ. ಬೆಳಗ್ಗೆ 2.32ಮೀಟರ್‌ ಇದ್ದ ನೀರಿನ ಮಟ್ಟ ಸಂಜೆ ವೇಳೆಗೆ 23ಸೆಂಮೀ ಏರಿಕೆಯಾಗಿದೆ.

ಡ್ಯಾಂ ತುಂಬಿದ ಬಳಿಕ ಗೇಟ್‌ ತೆರವು: ತುಂಬೆ ಡ್ಯಾಂ ನೀರಿನ ಮಟ್ಟ ಬಿರುಸಿನ ಮಳೆಯಿಂದ ಏರಿಕೆಯಾಗುತ್ತಿದ್ದು, ಬಹುತೇಕ ಡ್ಯಾಂ ತುಂಬಿದ ಬಳಿಕವೇ ಗೇಟ್‌ ತೆರವು ಕಾರ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ