ಆ್ಯಪ್ನಗರ

ಮಂಗಳೂರು: ಕುಡಿದು ಪ್ರಜ್ಞಾಹೀನಳಾದ ಕಾಲೇಜು ವಿದ್ಯಾರ್ಥಿನಿ, ವಿಡಿಯೋ ವೈರಲ್

ಕಾಲೇಜು ವಿದ್ಯಾರ್ಥಿನಿ ಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದು, ಪೊಲೀಸರು ಎಚ್ಚರಿಕೆ ನೀಡಿ ಹೆತ್ತವರೊಂದಿಗೆ ಕಳುಹಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಯುವತಿಯು ಅಮಲಿನಲ್ಲಿರುವ ವಿಡಿಯೋ ವೈರಲ್ ಆಗಿದೆ.

Vijaya Karnataka Web 14 Dec 2019, 11:25 am
ಸುರತ್ಕಲ್: ಕುಳಾಯಿಯಲ್ಲಿ ಕಾರೊಂದರಲ್ಲಿ ಕಾಲೇಜು ವಿದ್ಯಾರ್ಥಿನಿ ಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದು, ಪೊಲೀಸರು ಎಚ್ಚರಿಕೆ ನೀಡಿ ಹೆತ್ತವರೊಂದಿಗೆ ಕಳುಹಿಸಿ ಕೊಟ್ಟಿರುವ ಘಟನೆ ನಡೆದಿದೆ.
Vijaya Karnataka Web mangaluru girl drunked video goes viral in social media
ಮಂಗಳೂರು: ಕುಡಿದು ಪ್ರಜ್ಞಾಹೀನಳಾದ ಕಾಲೇಜು ವಿದ್ಯಾರ್ಥಿನಿ, ವಿಡಿಯೋ ವೈರಲ್


ಗುರುವಾರ ಮಧ್ಯಾಹ್ನ ಸುರತ್ಕಲ್‌ನ ಎನ್‌ಐಟಿಕೆ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಇಬ್ಬರು ಸಂಜೆಯವರೆಗೆ ಪಾರ್ಟಿ ಮಾಡಿದ್ದರು. ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದು, ಇದರಿಂದ ಯುವತಿ ಪ್ರಜ್ಞಾಹೀನ ಸ್ಥಿತಿಗೆ ಬಂದಿದ್ದಳು.

ಕಾರಿನೊಳಗಿದ್ದ ಯುವತಿಯ ಸ್ಥಿತಿಯನ್ನು ನೋಡಿದ ಇತರ ವಾಹನ ಸವಾರರು ಮತ್ತು ಸಾರ್ವಜನಿಕರು ತೆರಳುತ್ತಿದ್ದ ಕಾರನ್ನು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದರು. ಹೆದರಿದ ಯುವಕ ಕಾರು ಬಿಟ್ಟು ಪರಾರಿಯಾಗಲು ಯತ್ನಿಸಿದ. ಈತನ ನಡವಳಿಕೆಯಿಂದ ಸಂಶಯಗೊಂಡ ಸ್ಥಳೀಯರು ಹಾಗೂ ಸಾರ್ವಜನಿಕರು ಸುರತ್ಕಲ್‌ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿ ಕಾಲೇಜೊಂದರ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಎಂಬುದನ್ನು ಸ್ಪಷ್ಟಪಡಿಸಿದರು.

ಇದೀಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ, ಕಾರಿನ ಚಿತ್ರ ಹಾಗೂ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರದಿಂದ ವೈರಲ್ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ