ಆ್ಯಪ್ನಗರ

ಏಪ್ರಿಲ್‌ 29: ಧರ್ಮಸ್ಥಳದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳದಲ್ಲಿ ಏಪ್ರಿಲ್‌ 29ರಂದು ಆದಿತ್ಯವಾರ ಸಾಯಂಕಾಲ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

Vijaya Karnataka Web 18 Feb 2018, 7:52 am

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್‌ 29ರಂದು ಆದಿತ್ಯವಾರ ಸಾಯಂಕಾಲ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೆ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12,029 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್‌ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256 - 277144.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ