ಆ್ಯಪ್ನಗರ

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದು ಕೊರೊನಾ ಸೋಂಕು ಪತ್ತೆಯಾಗಿದೆ. ಬೋಳೂರು ಸಮೀಪದ 58 ವರ್ಷ ಪ್ರಾಯದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 22ಕ್ಕೆ ಏರಿದೆ.

Vijaya Karnataka Web 30 Apr 2020, 9:09 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇನ್ನೊಂದು ಬಲಿಯಾಗಿದೆ. ಬಂಟ್ವಾಳ ಕಸಬ ಗ್ರಾಮದ 67 ವರ್ಷದ ಮಹಿಳೆ ಗುರುವಾರ ಸಂಜೆ ಚಿಕಿತ್ಸೆಗೆ ಸ್ಪಂದಿಸದೆ ಸರಕಾರಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ


ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದೆ.

ಮೃತಪಟ್ಟ ಮೂವರು ಕೂಡಾ ಮಹಿಳೆಯರಾಗಿದ್ದು, ಇವರೆಲ್ಲರೂ ಬಂಟ್ವಾಳ ಕಸಬದ ಒಂದೇ ಪ್ರದೇಶದವರಾಗಿದ್ದಾರೆ. ಈ ಮೊದಲು ಮೃತಪಟ್ಟಿದ್ದ ಇಬ್ಬರು ಮಹಿಳೆಯರು ಒಂದೇ ಮನೆಯವರಾಗಿದ್ದು, ಗುರುವಾರ ಮೃತಪಟ್ಟ ಮಹಿಳೆ ಪಕ್ಕದ ಮನೆಯವರಾಗಿದ್ದಾರೆ.

ರೋಗಿ ಸಂಖ್ಯೆ 409 ಆಗಿರುವ ಈ ಮಹಿಳೆ ಕೆಮ್ಮು, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಏ.18ರಂದು ವೆನ್‍ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ಪರೀಕ್ಷಿಸಿದಾಗ ಉಸಿರಾಟ ಸಮಸ್ಯೆ ಗಂಭೀರ ಆಗಿರುವುದು ಕಂಡು ಬಂದಿತ್ತು.

ಅಲ್ಲದೆ ಶ್ವಾಸಕೋಶ ಹಾಗೂ ಮಧುಮೇಹ ರೋಗದಿಂದಲೂ ಬಳಲುತ್ತಿದ್ದರು. ದಾಖಲಾದ ಸಂದರ್ಭ ಅವರ ಗಂಟಲಿನ ಸ್ರಾವದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.

ಗಂಭೀರ ಸ್ಥಿತಿಯಲ್ಲಿದ ಅವರನ್ನು ವೆನ್‍ಲಾಕ್ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗುರುವಾರ ಸಂಜೆ 5.40ಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಒಂದು ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದು ಕೊರೊನಾ ಸೋಂಕು ಪತ್ತೆಯಾಗಿದೆ. ಬೋಳೂರು ಸಮೀಪದ 58 ವರ್ಷ ಪ್ರಾಯದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 22ಕ್ಕೆ ಏರಿದೆ. ಜಿಲ್ಲೆಯಲ್ಲಿ ಒಟ್ಟು 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ