ಆ್ಯಪ್ನಗರ

ಚರ್ಚೆ ಬಳಿಕವೇ ಲೋಕಸಭೆ ಸೀಟು ಹಂಚಿಕೆ ನಿರ್ಧಾರ: ಸಿದ್ದು

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ ಬಳಿಕವೇ ಸ್ಥಾನ ಹಂಚಿಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Vijaya Karnataka 3 Feb 2019, 5:07 pm
ಮಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ ಬಳಿಕವೇ ಸ್ಥಾನ ಹಂಚಿಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Vijaya Karnataka Web only after disscussion loksabha seats finalise sidhu
ಚರ್ಚೆ ಬಳಿಕವೇ ಲೋಕಸಭೆ ಸೀಟು ಹಂಚಿಕೆ ನಿರ್ಧಾರ: ಸಿದ್ದು


ಮಂಗಳೂರಿನಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಎಲ್ಲ ಕಡೆಯೂ ಕೇಳ್ತಾರೆ. ಯಾರಿಗೆ ಟಿಕೆಟ್‌ ಕೊಟ್ಟರೆ ಯಾರು ಗೆಲ್ತಾರೆ ಎಂಬುದನ್ನು ನಿರ್ಧರಿಸಿಲ್ಲ. ಚರ್ಚೆಯ ಬಳಿಕ ಸೀಟು ಹಂಚಿಕೆ ನಿರ್ಧಾರವಾಗುತ್ತೆ ಎಂದದರು.

ಸುಮಲತಾಗೆ ಟಿಕೆಟ್‌ ನೀಡಲು ಒತ್ತಡ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿಸುಮಲತಾ ಅಂಬರೀಶ್‌ಗೆ ಟಿಕೆಟ್‌ ನೀಡಲು ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಆದರೆ ಟಿಕೆಟ್‌ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್‌- ಜೆಡಿಎಸ್‌ ನಾಯಕರು ಕುಳಿತು ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಸಮ್ಮಿಶ್ರ ಸರಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳು ಎಂಬ ಬಿಜೆಪಿ ಟೀಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ತನ್ನ 5 ವರ್ಷಗಳ ತನ್ನ ಅಧಿಕಾರ ಅವಧಿಯಲ್ಲಿ ಮೂವರನ್ನು ಮುಖ್ಯಮಂತ್ರಿ ಮಾಡಿತ್ತು. ಹಲವರ ಮೇಲೆ ಕ್ರಿಮಿನಲ್‌ ಕೇಸ್‌ ಕೂಡ ಆಯ್ತು. 8 ಮಂದಿ ಜೈಲಿಗೆ ಹೋದ್ರು. ಅವರು ಏನ್ರೀ ಈಗ ಮಾತನಾಡುತ್ತಾರೆ ಎಂದು ಪ್ರಶ್ನಿಸಿದರು.

ಸಚಿವ ಡಿ.ಕೆ. ಶಿವಕುಮಾರ್‌ ಅವರ ಹೊಸದಿಲ್ಲಿ ನಿವಾಸದ ಮೇಲೆ ಇಡಿ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಡಿ ದಾಳಿ ವಿಚಾರ ನನಗೆ ಗೊತ್ತಿಲ್ಲ, ಡಿ.ಕೆ. ಶಿವಕುಮಾರ್‌ ಕಾನೂನು ಮೂಲಕ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿ ಐಟಿ, ಇಡಿ ಉಪಯೋಗಿಸಿ ಕಾಂಗ್ರೆಸ್‌ ನಾಯಕರ ಮೇಲೆ ರಾಜಕೀಯ ದ್ವೇಷ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ