ಆ್ಯಪ್ನಗರ

ಅಡಕೆ ಬಗ್ಗೆ ಸಂಸದರ ನಿಯೋಗದಿಂದ ಕೇಂದ್ರ ಆರೋಗ್ಯ ಸಚಿವರಿಗೆ ವಿವರಣೆ

ಅಡಕೆ ಜಗಿಯುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಜು.12ರಂದು ಕೇಂದ್ರ ಸರಕಾರ ಸಂಸತ್‌ನಲ್ಲಿ ನೀಡಿರುವ ಉತ್ತರದ ಬಗ್ಗೆ ಬುಧವಾರ ಸಂಸದ ನಳಿನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ.

Vijaya Karnataka 18 Jul 2019, 5:00 am
ಮಂಗಳೂರು: ಅಡಕೆ ಜಗಿಯುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಜು.12ರಂದು ಕೇಂದ್ರ ಸರಕಾರ ಸಂಸತ್‌ನಲ್ಲಿ ನೀಡಿರುವ ಉತ್ತರದ ಬಗ್ಗೆ ಬುಧವಾರ ಸಂಸದ ನಳಿನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ.
Vijaya Karnataka Web 7M-Adike


ಕೇಂದ್ರ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ವರದಿಯು ಅಡಕೆ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ ಎಂಬ ಬಗ್ಗೆ ಸಚಿವರಿಗೆ ನಿಯೋಗ ವಿವರಣೆ ನೀಡಿತು.

ಈ ಬಗ್ಗೆ ಸ್ಪಂದಿಸಿದ ಸಚಿವರು, ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯುಪಿಎ ಸರಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವುದರಿಂದ ಈ ಅಫಿಡವಿಟ್‌ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್‌ನಿಂದ ಅಫಿಡವಿಟ್‌ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದುತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್‌, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ