ಆ್ಯಪ್ನಗರ

Sadashiva Salian: ಚಲನಚಿತ್ರ ನಟ ಸದಾಶಿವ ಸಾಲ್ಯಾನ್‌ ನಿಧನ

ಮುಂಬಯಿ ನಾಟಕ ರಂಗದಲ್ಲಿ ಬೆಳೆದು ನಂತರ ಕನ್ನಡ, ತುಳು ಚಿತ್ರರಂಗದಲ್ಲಿ ಮಿಂಚಿದ ಧೀಮಂತ ನಟ ಸದಾಶಿವ ಸಾಲ್ಯಾನ್‌ (68) ಭಾನುವಾರ ಮೀರಾ ರೋಡ್‌ನ ಸ್ವಗೃಹದಲ್ಲಿ ನಿಧನರಾದರು.

Vijaya Karnataka 10 Jul 2018, 11:14 am
ಮಂಗಳೂರು: ಮುಂಬಯಿ ನಾಟಕ ರಂಗದಲ್ಲಿ ಬೆಳೆದು ನಂತರ ಕನ್ನಡ, ತುಳು ಚಿತ್ರರಂಗದಲ್ಲಿ ಮಿಂಚಿದ ಧೀಮಂತ ನಟ ಸದಾಶಿವ ಸಾಲ್ಯಾನ್‌ (68) ಭಾನುವಾರ ಮೀರಾ ರೋಡ್‌ನ ಸ್ವಗೃಹದಲ್ಲಿ ನಿಧನರಾದರು.
Vijaya Karnataka Web Actor


ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬಯಿ ರಂಗ ಕಲಾವಿದನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಇವರು ನಾವಿಂದು ಭಾಗ್ಯವಂತೆದಿ, ಬದ್ಕೆರೆ ಬುಡ್ಲೆ, ಪೆಟ್ಟಾಯಿ ಪಿಲಿ, ಸತ್ಯ ಓಲುಂಡು, ದಾರೆದ ಸೀರೆ, ಸಮರಸಿಂಹ, ಇವಳಂತ ಹೆಂಡ್ತಿ, ಅನಾಥ ರಕ್ಷ ಕ, ಸಿಡಿದೆದ್ದ ಪಾಂಡವರು, ಕಾಲೇಜು ರಂಗ, ಉತ್ತರಧ್ರುವದಿಂದ ದಕ್ಷಿಣ ಧ್ರುವಕ್ಕೂ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಮೃತರಿಗೆ ಪತ್ನಿ, ಎರಡು ಹೆಣ್ಣು ಮಕ್ಕಳು ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ