ಆ್ಯಪ್ನಗರ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಸವಣೂರಿನ ಝಾಕಿರ್ (29), ಮತ್ತು ಬೆಳ್ಳಾರೆಯ ಶಫೀಕ್ (27) ಎಂಬವರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣ ಮಹತ್ವದ ತಿರುವು ಪಡೆದಿದೆ. ಬಂಧಿತರು ಎಸ್ ಡಿ ಪಿ ಐ ಕಾರ್ಯಕರ್ತರು ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದು ಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು.

Vijaya Karnataka Web 28 Jul 2022, 2:15 pm
ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web Praveen Nettar


ಪುತ್ತೂರು ತಾಲೂಕಿನ ಸವಣೂರಿನ ಝಾಕಿರ್ (29), ಮತ್ತು ಬೆಳ್ಳಾರೆಯ ಶಫೀಕ್ (27) ಎಂಬವರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣ ಮಹತ್ವದ ತಿರುವು ಪಡೆದಿದೆ. ಬಂಧಿತರು ಎಸ್ ಡಿ ಪಿ ಐ ಕಾರ್ಯಕರ್ತರು ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರ್‌ ಹತ್ಯೆ ಪ್ರಕರಣ: ರೊಚ್ಚಿಗೆದ್ದ ಕಾರ್ಯಕರ್ತರಿಂದ ನಳಿನ್ ಕುಮಾರ್ ಕಟೀಲ್ ಕಾರು ಜಗ್ಗಾಡಿ ಜಖಂ
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ (32) ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ಸಂಬಂಧ ಜಿಲ್ಲೆಯಲ್ಲಿ ಕಾರ್ಯಕರ್ತರ ಆಕ್ರೋಶದ ಕಟ್ಟೆಯೇ ಒಡೆದಿತ್ತು.

ಪ್ರವೀಣ್ ರನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಹಿಂದುತ್ವಪರ ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ ನೀಡಿದ್ದವು. ದಕ್ಷಿಣ ಕನ್ನಡ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಶುಕ್ರವಾರ ಬೆಳಗ್ಗೆ ಮಾತನಾಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಈಗಾಗಲೇ 15 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ಆಶ್ವಾಸನೆ ಕೊಟ್ಟಿದ್ದರು. ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ